ಮಂಗಳೂರು : ಅಯ್ಯಪ್ಪ ಮಾಲೆ ಧರಿಸಿ, ಸಂಸ್ಥೆಯೊಂದರ ಹೆಸರನ್ನು ದುರುಪಯೋಗಪಡಿಸಿಕೊಂಡು ದೇಣಿಗೆ ಸಂಗ್ರಹಿಸುತ್ತಿದ್ದ ಇಬ್ಬರು ಯುವಕರನ್ನು ಹಿಡಿದು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವಕರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ, ಬೆಂಗಳೂರಿನ ಸ್ವಾಮಿ ವಿವೇಕಾನಂದ ಸೋಷಿಯಲ್ ಸರ್ವಿಸ್ ಟ್ರಸ್ಟ್ (ರಿ) ಹೆಸರಿನಲ್ಲಿ ದೇಣಿಗೆ ಕೇಳುತ್ತಿದ್ದರು.
ಯುವಕರು ಬೆಂಗಳೂರಿನ ಸ್ವಾಮಿ ವಿವೇಕಾನಂದ ಸೋಷಿಯಲ್ ಸರ್ವಿಸ್ ಟ್ರಸ್ಟ್ (ರಿ) ಹೆಸರಲ್ಲಿ ನಿಡ್ಲೆ ಗ್ರಾಮದ ಧನುಷ್ ಎಂಬವರ ಬಳಿ ದೇಣಿಗೆ ಕೇಳಿದ್ದಾರೆ. ಅನುಮಾನಗೊಂಡ ಧನುಷ್ ಸಂಸ್ಥೆಯ ಮೊಬೈಲ್ ನಂಬರ್‌ಗೆ ಕರೆ ಮಾಡಿ ವಿಚಾರಿಸಿದ್ದಾರೆ. ಆಗ ಸಂಸ್ಥೆಯವರು ನಾವು ಯಾರನ್ನೂ ಕಳುಹಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ವಿಷಯ ತಿಳಿದ ಕೂಡಲೆ ಧನುಷ್ ಸೇರಿದಂತೆ ಸುತ್ತಮುತ್ತಲಿನ ಜನರು ಯುವಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿತರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರು ಯುವಕರಲ್ಲಿ ಓರ್ವ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದ್ದನು. ಸದ್ಯ ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ.
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…