Featured

ಮಂಗಳೂರು : ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳೊಂದಿಗೆ 600 ಕಿ.ಮೀ ಪ್ರಯಾಣಿಸಿದ ಅಪರಿಚಿತ ಶ್ವಾನ..: vishwanews24

ಮಂಗಳೂರು : ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳೊಂದಿಗೆ 600 ಕಿ.ಮೀ ಪ್ರಯಾಣಿಸಿದ ಅಪರಿಚಿತ ಶ್ವಾನ..

ಮಂಗಳೂರು: ಪಾದಯಾತ್ರೆ ನಡೆಸುತ್ತಿದ್ದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಜೊತೆಗೆ ಅಪರಿಚಿತ ಶ್ವಾನವೊಂದು ಸುಮಾರು 600ಕಿ.ಮೀ ಹೆಜ್ಜೆ ಹಾಕಿದ ಘಟನೆ ಎಲ್ಲರಲ್ಲೂ ಅಚ್ಚರಿ ಮೂಡಿದೆ.

ಶಬರಿಮಲೆ ಅಯ್ಯಪ್ಪ ದೇವರ ಸನ್ನಿಧಾನಕ್ಕೆ ತೆರಳಿದ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಬೇಕ್ಕೇರಿ ಗ್ರಾಮದಿಂದ ಅಯ್ಯಪ್ಪ ಮಾಲಾಧಾರಿಗಳು ನ. 4 ರಂದು ಪಾದಯಾತ್ರೆ ಶುರು ಮಾಡಿದ್ದರು. ಇವರು ಪಾದಯಾತ್ರೆ ಮಾಡುತ್ತಿದ್ದ ವೇಳೆ ಗೋಕಾಕ್ ತಾಲೂಕಿನ ಗ್ರಾಮವೊಂದರಲ್ಲಿ ಅಪರಿಚಿತ ಶ್ವಾನವೊಂದು ಅವರ ಜೊತೆಗೆ ಹೆಜ್ಜೆ ಹಾಕಿದೆ. ಮೊದಲು ಏನೋ ಸ್ವಲ್ಪ ದೂರ ಬರಬಹುದು ಎಂದು ಅಯ್ಯಪ್ಪ ಮಾಲಾಧಾರಿಗಳು ಅಂದುಕೊಂಡಿದ್ದರು. ಆದರೆ ಇದೀಗ ಅವರೊಂದಿಗೆ ಸುಮಾರು 600 ಕಿಲೋ ಮೀಟರ್ ಕ್ರಮಿಸಿದೆ. ಪ್ರತಿ ದಿನ ಸುಮಾರು 40 ಕಿಮೀ ನಡೆಯುತ್ತಿರುವ ಶ್ವಾನವನ್ನು ಕಂಡು ಎಲ್ಲಾರು ಇದೀಗ ಅಚ್ಚರಿ ಮೂಡಿದೆ.

ಹತ್ತು ಮಂದಿ ಮಾಲಾಧಾರಿಗಳ ತಂಡ ಮಂಗಳೂರು ಮೂಲಕ ರಾಜ್ಯದ ಗಡಿದಾಟಿ ಕೇರಳದ ಕಾಸರಗೋಡಿಗೆ ತಲುಪಿದ್ದಾರೆ. ಗುರು ಸ್ವಾಮಿಗಳು ಶ್ವಾನವನ್ನು ಓಡಿಸಿದರು ಸಹ ಅದು ಹೋಗಿಲ್ಲ. ಅದರಿಂದ ತಪ್ಪಿಸಿಕೊಂಡು ಹೋಗುವ ಯಾವ ಪ್ರಯತ್ನವು ಸಫಲವಾಗಿಲ್ಲ. ಅಯ್ಯಪ್ಪ ಮಾಲಾಧಾರಿಗಳು ನಡೆಯುವಾಗ ನಡೆಯುತ್ತದೆ.

ವಿಶ್ರಾಂತಿ ತೆಗೆದುಕೊಳ್ಳುವ ಸಂದರ್ಭದಲ್ಲಿ ಅದೂ ವಿಶ್ರಾಂತಿ ತೆಗೆದುಕೊಳ್ಳುತ್ತದೆ. ಅಯ್ಯಪ್ಪ ಸ್ವಾಮಿಗಳು ಪ್ರಯಾಣ ಮುಂದುವರಿಸಿದಾಗ ಅದೂ ಹಿಂಬಾಲಿಸುತ್ತದೆ ಎಂದು ಅಯ್ಯಪ್ಪ ಮಾಲಾಧಾರಿಗಳು ತಿಳಿಸಿದ್ದಾರೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

9 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

17 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

17 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

18 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

18 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

18 hours ago