Featured

ಮಂಗಳೂರು: ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ರಾಜೇಂದ್ರ ಸೂಚನೆ – Vishwanews24

ಮಂಗಳೂರು: ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ರಾಜೇಂದ್ರ ಸೂಚನೆ – Vishwanews24

ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್ ಸೋಂಕು ತಹಬದಿಗೆ ಬಂದಿದೆ, ಆದರೆ, ಸಂಪೂರ್ಣವಾಗಿ ಹೋಗಿಲ್ಲ. ಈ ಅಂಶವನ್ನು ಪರಿಗಣನೆಗೆ ತೆಗೆದುಕೊಂಡು ಮುಂಬರುವ ನವೆಂಬರ್ ಒಂದರಂದು ಕನ್ನಡ ರಾಜ್ಯೋತ್ಸವವನ್ನು ಎಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನೊಳಗೊಂಡಂತೆ ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಅಧಿಕಾರಿಗಳು ಈಗಿನಿಂದಲೇ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನವೆಂಬರ್ 1ರ ಕನ್ನಡ ರಾಜ್ಯೋತ್ಸವ ನಿಮಿತ್ತ ನಗರದ ನೆಹರೂ ಕ್ರೀಡಾಂಗಣದಲ್ಲಿ ಸಚಿವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡುವರು.

ಈ ಸಂದರ್ಭದಲ್ಲಿ ನಾಡಗೀತೆ ಹಾಗೂ ರೈತ ಗೀತೆಯನ್ನು ಹಾಡುವ ಶಿಕ್ಷಕ ವೃಂದ ಉತ್ತಮವಾಗಿ ತಾಲೀಮು ನಡೆಸಿರಬೇಕು, ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಜವಬ್ದಾರಿ ವಹಿಸಬೇಕು, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಲೋಕೋಪಯೋಗಿ ಇಲಾಖೆಯಿಂದ ಕ್ರೀಡಾಂಗಣವನ್ನು ಸ್ವಚ್ಛ ಪಡಿಸುವ ಹಾಗೂ ಸಮತಟ್ಟು ಮಾಡುವ ಕೆಲಸವಾಗಬೇಕು, ಮಳೆಬರುವ ಸಾಧ್ಯತೆಗಳಿರುವುದರಿಂದ, ಗಣ್ಯರು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಮಳೆಗೆ ಸಿಲುಕದಂತೆ ಉತ್ತಮ ಪೆಂಡಾಲ್‍ಗಳನ್ನು ಹಾಕಬೇಕು, ಅದರೊಂದಿಗೆ ಕನ್ನಡ ರಾಜ್ಯೋತ್ಸವ ಆಚರಣೆಗೆ ವಿವಿಧ ಇಲಾಖೆಗಳು ನಿರ್ವಹಿಸಬೇಕಾದ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ಮಾಡುವ ಬಗ್ಗೆ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ಅವರು ನಿರ್ದೇಶನ ನೀಡಿದರು.

ಡಿಸಿಪಿ ಹರಿರಾಮ್ ಶಂಕರ್, ಪೆÇ್ರಬೆಷನರಿ ಐಎಎಸ್ ಅಧಿಕಾರಿ ಅಕ್ರಮ್ ಶಾ, ಅಪರ ಜಿಲ್ಲಾಧಿಕಾರಿ ಮಾಣಿಕ್ಯ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

4 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

4 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

4 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

5 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

6 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

6 hours ago