ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಮೀನುಗಾರರೋರ್ವರು ಸಮುದ್ರದ ಅಲೆಗಳ ತೀವ್ರತೆಯಿಂದ ಆಯ ತಪ್ಪಿ ಬೋಟ್‌ನಿಂದ ಸಮುದ್ರಕ್ಕೆ ಬಿದ್ದು ನಾಪತ್ತೆಯಾದ ಘಟನೆ ನಡೆದಿದ್ದು, ವ್ಯಕ್ತಿ ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ಕೋರಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕುಮುಟಾ ತಾಲೂಕಿನ ನಿವಾಸಿ ನಾಗರಾಜ (34) ನಾಪತ್ತೆಯಾದವರು. ನಾಗರಾಜ ಅವರು ಅಕ್ಟೋಬರ್ 5ರಂದು ಮಂಗಳೂರು ಬಂದರಿನಿಂದ 8 ಜನರ ತಂಡದೊಂದಿಗೆ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಅಕ್ಟೋಬರ್ 8ರ ಬೆಳಗ್ಗೆ 7.30ಕ್ಕೆ ಅರಬೀ ಸಮುದ್ರದ 92 ನಾಟಿಕಲ್ ಮೈಲ್ ದೂರದಲ್ಲಿ ಮೀನುಗಾರಿಕೆ ಮಾಡುತ್ತಿರುವಾಗ ಸಮುದ್ರದ ಅಲೆಗಳ ತೀವ್ರತೆಯಿಂದ ಆಯ ತಪ್ಪಿ ಬೋಟ್‌ನಿಂದ ಸಮುದ್ರಕ್ಕೆ ಬಿದ್ದು ಕಾಣೆಯಾಗಿದ್ದಾರೆ. ಮೀನುಗಾರ ಕಾಣೆಯಾಗಿರುವ ಬಗ್ಗೆ ಮಂಗಳೂರು ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು:ತುಳು ಭಾಷೆಯ ಸರ್ವತೋಮುಖ ಅಭಿವೃದ್ದಿಗೆ ಸದಾ ಸಿದ್ದ: ವೇದವ್ಯಾಸ್ ಕಾಮತ್ – vishwanews24
ನಾಗರಾಜ ಅವರು 5.5 ಅಡಿ ಎತ್ತರವಿದ್ದು, ಎಣ್ಣೆ ಕಪ್ಪು ಮೈಬಣ್ಣ, ದುಂಡು ಮುಖ, ಧೃಡಕಾಯ ಶರೀರ ಹೊಂದಿದ್ದಾರೆ. ಹಳದಿ ಬಣ್ಣದ ಟಿ ಶರ್ಟ್ ಮತ್ತು ನೀಲಿ ಬಣ್ಣದ ಬರ್ಮುಡಾ ಚಡ್ಡಿ ಧರಿಸಿರುತ್ತಾರೆ.
ಈ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ 9480800574, 7019531957 ಅಥವಾ ಮಂಗಳೂರು ಕರಾವಳಿ ಕಾವಲು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಯವರು ಮನವಿ ಮಾಡಿದ್ದಾರೆ.
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…