Judge and gavel in courtroom
ಮಂಗಳೂರು : ನಗರದ ಹೊರವಲಯದ ಕುಡುಪುವಿನಲ್ಲಿ ಎ. 27ರಂದು ನಡೆದ ಮುಹಮ್ಮದ್ ಅಶ್ರಫ್ ಗುಂಪು ಹತ್ಯೆ ಪ್ರಕರಣದಲ್ಲಿ ಜಾಮೀನು ಕೋರಿ ಹತ್ತು ಮಂದಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಕರಣದ ಆರೋಪಿಗಳಾದ ಅನಿಲ್ ಕುಮಾರ್ (28), ಸಾಯಿದೀಪ್ (29), ಅನಿಲ್ ಕುಮಾರ್ (31), ಯತಿರಾಜ್ (27), ಮನೀಶ್ ಶೆಟ್ಟಿ (21), ಪ್ರದೀಪ್ (36), ವಿವಿಯನ್ ಆಲ್ವರಿಸ್ (41), ಶ್ರೀದತ್ತ (32), ಧನುಷ್ (31) ಹಾಗೂ ಕಿಶೋರ್ ಕುಮಾರ್ (37) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಮುಹಮ್ಮದ್ ನವಾಝ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಆದ್ದರಿಂದ, ಬದಲಾದ ಸನ್ನಿವೇಶದಲ್ಲಿ ಆರೋಪಿಗಳು ಜಾಮೀನು ಕೋರಿ ವಿಚಾರಣಾ ನ್ಯಾಯಾಲಯದಲ್ಲೇ ಅರ್ಜಿ ಸಲ್ಲಿಸಲಿ ಎಂದು ಸೂಚಿಸಿ, ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿತು.
ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…
ತಮಿಳುನಾಡು ಸಿಎಂ ವಿಜಯ್ ವಿರುದ್ಧ ಪ್ರತಿಭಟನೆಗೆ ಯತ್ನ : 20ಕ್ಕೂ ಹೆಚ್ಚು ಕರವೇ ಕಾರ್ಯಕರ್ತರು ವಶಕ್ಕೆ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್…
ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್ ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ…
ಮೇಕೆದಾಟು ಯೋಜನೆಗೆ ಅನುಮತಿ ನೀಡಿ : ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಮನವಿ ಬೆಂಗಳೂರು: ಮಹತ್ವಾಕಾಂಕ್ಷಿ ಮೇಕೆದಾಟು ಜಲಾಶಯ ಯೋಜನೆಗೆ…
ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಪ್ರಕಾಶ್ ರಾಜ್ ಹೆಸರು ತಳುಕು ; ಹೆಸರು ಪ್ರಸ್ತಾಪ ಆದ ಕೂಡಲೇ ಕ್ರಿಮಿನಲ್ ಅಲ್ಲ: ಪ್ರಿಯಾಂಕ್…
260 ಜನರ ಬಲಿ ಪಡೆದ ಅಹಮದಾಬಾದ್ ಏರ್ ಇಂಡಿಯಾ ದುರಂತಕ್ಕೆ 1 ವರ್ಷ ಅಹಮದಾಬಾದ್: 260 ಜನರ ಸಾವಿಗೆ ಕಾರಣವಾದ…