Featured

ಮಂಗಳೂರು ಅಶ್ರಫ್‌ ಗುಂಪು ಹತ್ಯೆ ಪ್ರಕರಣ: ನಿಷ್ಪಕ್ಷ ತನಿಖೆ ನಡೆಸಿ ನ್ಯಾಯವನ್ನು ದೊರಕಿಸಿಕೊಡುವಂತೆ ಸಹೋದರನಿಂದ ಉಸ್ತುವಾರಿ ಸಚಿವರಿಗೆ ಮನವಿ – vishwanews24

ಮಂಗಳೂರು ಅಶ್ರಫ್‌ ಗುಂಪು ಹತ್ಯೆ ಪ್ರಕರಣ: ನಿಷ್ಪಕ್ಷ ತನಿಖೆ ನಡೆಸಿ ನ್ಯಾಯವನ್ನು ದೊರಕಿಸಿಕೊಡುವಂತೆ ಸಹೋದರನಿಂದ ಉಸ್ತುವಾರಿ ಸಚಿವರಿಗೆ ಮನವಿ

ಮಂಗಳೂರು : ಕುಡುಪುವಿನಲ್ಲಿ ಕ್ರಿಕೆಟ್ ಪಂದ್ಯಾಟದ ವೇಳೆ ನಡೆದ ಕೇರಳದ ವಯನಾಡ್ ಜಿಲ್ಲೆಯ ಪುಲ್ಪಳ್ಳಿ ಅಶ್ರಫ್‌ ಗುಂಪು ಹತ್ಯೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ನ್ಯಾಯವನ್ನು ದೊರಕಿಸಿಕೊಡುವಂತೆ ಅಶ್ರಫ್‌ ಸಹೋದರ ಜಬ್ಬಾರ್ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿದರು.

ʼಎಪ್ರಿಲ್‌ 27ರಂದು ನನ್ನ ಸಹೋದರ ಅಶ್ರಫ್ ಮಂಗಳೂರಿನ ಕುಡುಪು ಬಳಿ ಹತ್ಯೆಗೀಡಾಗಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಕೈಗೊಂಡಿರುವ ತನಿಖಾ ಪ್ರಕ್ರಿಯೆಯಲ್ಲಿ ಹಲವಾರು ಲೋಪಗಳು ಕಂಡು ಬಂದಿದೆ. ಅದರ ಬಗ್ಗೆ ಮಾಧ್ಯಮಗಳಲ್ಲಿಯೂ ವರದಿಯಾಗಿದೆ. FIR ದಾಖಲಿಸುವುದರಲ್ಲಿ ಮತ್ತು ಪ್ರಕರಣದ ತನಿಖೆಯಲ್ಲಿ ಪೊಲೀಸರು ಪಾಲಿಸಬೇಕಿದ್ದ ಕೆಲವು ಪ್ರಕ್ರಿಯೆಯಲ್ಲಿ ಲೋಪಗಳು ಉಂಟಾಗಿರುವ ಕಾರಣಕ್ಕೆ ತನಿಖಾಧಿಕಾರಿಯೂ ಸೇರಿದಂತೆ ಇಬ್ಬರು ಪೇದೆಗಳನ್ನು ಈಗಾಗಲೇ ಇಲಾಖೆಯು ಅಮನಾತುಗೊಳಿಸಿದೆಯಾದರೂ, ಅವರ ಬದಲಿಗೆ ತನಿಖಾಧಿಕಾರಿಯನ್ನು ಈವರೆಗೆ ನೇಮಿಸಿಲ್ಲ. ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ದಕ್ಷ ಪೊಲೀಸ್ ಅಧಿಕಾರಿಯೊಬ್ಬರನ್ನು ತಕ್ಷಣ ನೇಮಿಸಬೇಕು. ನಮಗೆ ನ್ಯಾಯವನ್ನು ದೊರಕಿಸಿಕೊಡಬೇಕುʼ ಎಂದು ಅಶ್ರಫ್‌ ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಗುಂಪು ಹತ್ಯೆ ಪ್ರಕರಣಗಳಲ್ಲಿ ಸಂತ್ರಸ್ತರ ಕುಟುಂಬದವರಿಗೆ ಕಾನೂನಾತ್ಮಕವಾಗಿ ನೀಡಬೇಕಿರುವ ಪರಿಹಾರವನ್ನು ತಕ್ಷಣ ಘೋಷಿಸಬೇಕು. ತೆಹಸೀನ್ ಪೂನಾವಾಲ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯ ನೀಡಿರುವ ತೀರ್ಪಿನ ಅನ್ವಯ ಗುಂಪು ಹತ್ಯೆ ಪ್ರಕರಣಗಳನ್ನು Fast Track (ಫಾಸ್ಟ್ ಟ್ರ್ಯಾಕ್) ನ್ಯಾಯಾಲಯದಲ್ಲಿ ನಡೆಸಬೇಕಿರುವ ಕಾರಣ ಸದರಿ ಪ್ರಕರಣವನ್ನು Fast Track ನ್ಯಾಯಲಯಕ್ಕೆ ಒಪ್ಪಿಸಬೇಕು. ಭಾರತೀಯ ನ್ಯಾಯ ಸಂಹಿತೆ- 2023 ಜಾರಿಯಾದ ನಂತರ ಗುಂಪು ಹತ್ಯೆ ಪ್ರಕರಣ ಕರ್ನಾಟಕದಲ್ಲಿ ಬೆಳಕಿಗೆ ಬಂದಿರುವುದು ಇದೇ ಮೊದಲು. ಈ ಪ್ರಕರಣಕ್ಕೆ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ (SPP) ಅವರನ್ನು ಈ ಕೂಡಲೇ ನೇಮಿಸಬೇಕು. ಇಂತಹ ಪ್ರಕರಣಗಳು ಮತ್ತೆ ಮರುಕಳಿಸದಂತೆ ತೆಹಸೀನ್ ಪೂನಾವಾಲ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯ ನೀಡಿರುವ ತೀರ್ಪಿನ್ನು ಚಾಚೂ ತಪ್ಪದೆ ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

5 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

6 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

6 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

7 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

7 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

7 hours ago