ಮಂಗಳೂರು: ಇತ್ತೀಚೆಗೆ ನಿಧನರಾದ ರಾಜ್ಯಸಭೆ ಸದಸ್ಯ, ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಪಟೇಲ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಮಾಜಿ ಸಚಿವ ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನ ವಿವಿಧ ಪದಾಧಿಕಾರಿಗಳು ಅಹ್ಮದ್ ಪಟೇಲ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಿದರು. ನುಡಿ ನಮನ ಸಲ್ಲಿಸಿದ ಮಾಜಿ ಸಚಿವ ರಮಾನಾಥ ರೈ, “ಗಾಂಧಿ ಕುಟುಂಬದ ಆಪ್ತರಾಗಿದ್ದ ಅಹ್ಮದ್ ಪಟೇಲ್, ತಾಪಂ ಚುನಾವಣೆ ಮೂಲಕ ರಾಜಕೀಯಕ್ಕೆ ಪ್ರವೇಶ ಪಡೆದಿದ್ದರು. ನಂತರದ ದಿನಗಳಲ್ಲಿ ಉನ್ನತ ಮಟ್ಟದ ನಾಯಕರಾಗಿ ಬೆಳೆದರು. ಅಹ್ಮದ್ ಪಟೇಲರು ಕಾಂಗ್ರೆಸ್ ಅನ್ನೋ ಕಟ್ಟಡದ ಒಂದು ಪಿಲ್ಲರ್ ನಂತಿದ್ದರು. ಅವರ ಅಗಲುವಿಕೆ ಪಕ್ಷದ ಓರ್ವ ನಾಯಕನನ್ನಾಗಿ ಮಾತ್ರವಲ್ಲದೆ, ನಿಷ್ಠಾವಂತ ಕಾರ್ಯಕರ್ತನನ್ನು ಕಳೆದುಕೊಂಡಂತಾಗಿದೆ” ಎಂದರು.
ಈ ಸಂದರ್ಭ ಮಹಿಳಾ ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷೆ ಶಾಂತಲಾ ಗಟ್ಟಿ ಪತಿ ಯೋಗೀಶ್ ಗಟ್ಟಿ ಹಾಗೂ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ನಿಧನಕ್ಕೂ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಶಾಹುಲ್ ಹಮೀದ್, ವಿಶ್ವಾಸ್ ದಾಸ್, ಸುಭೋದ್ ಆಳ್ವ, ಅಬ್ಬಾಸ್ ಅಲಿ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…