Featured

ಮಂಗಳೂರು: ಅ. 16ರಂದು ಸುಳ್ಯ ತಾಲೂಕಿನಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ – Vishwanews24

ಮಂಗಳೂರು: ಅ. 16ರಂದು ಸುಳ್ಯ ತಾಲೂಕಿನಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ – Vishwanews24

ಮಂಗಳೂರು:ಸರ್ಕಾರದ ಜನಪರ ಯೋಜನೆಗಳನ್ನು ತಳಮಟ್ಟದಲ್ಲಿ ಜನಸಾಮಾನ್ಯರಿಗೆ ನೇರವಾಗಿ ಒದಗಿಸಬೇಕೆಂಬ ಆಶಯದಂತೆ ಜಿಲ್ಲೆಯ ಎಲ್ಲಾ ಕಂದಾಯ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಒಳಪಡುವ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಬಗೆಹರಿಸಲು ಪ್ರತೀ ತಿಂಗಳ ಮೂರನೇ ಶನಿವಾರದಂದು ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವ್ಯ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಇದೇ ಅ.16ರ ಶನಿವಾರ ಸುಳ್ಯ ತಾಲೂಕಿನ ಅಮರಮುಡ್ನೂರು ಮತ್ತು ಅಮರಪಡ್ನೂರು ಗ್ರಾಮಕ್ಕೆ ಭೇಟಿ ನೀಡಿ, ಅಂದು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ಗ್ರಾಮ ಲೆಕ್ಕಾಧಿಕಾರಿಗಳು ಪ್ರತೀ ಮನೆಯ ಸರ್ವೇ ಮಾಡಿ, ಅಲ್ಲಿನ ಸಮಸ್ಯೆಗಳಿಗೆ ಸಂಬಂಧಿಸಿ ಅರ್ಜಿಗಳನ್ನು ಸ್ವೀಕರಿಸುವಂತೆ ಈಗಾಗಲೇ ನಿರ್ದೇಶನ ನೀಡಲಾಗಿದೆ.

ಆದಾಗ್ಯೂ ಸಾರ್ವಜನಿಕರು ನೇರವಾಗಿ ಆಹವಾಲುಗಳನ್ನು ನೀಡಲು ಇಚ್ಛಿಸಿದ್ದಲ್ಲಿ, ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕುಕ್ಕುಜಡ್ಕದಲ್ಲಿ ಅರ್ಜಿ ನೀಡಬಹುದಾಗಿದೆ.

ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಕೂಡ ಅಂದು ಜಿಲ್ಲಾಧಿಕಾರಿಗಳ ಜೊತೆಗಿದ್ದು, ಸಮಸ್ಯೆಗಳನ್ನು ಆದಷ್ಟು ಸ್ಥಳದಲ್ಲೇ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು, ಯಾವುದೇ ಸಮಸ್ಯೆ ಸ್ಥಳದಲ್ಲೇ ಬಗೆಹರಿಯದ್ದಿದ್ದಲ್ಲಿ, ಮುಂದಿನ ಸೂಕ್ತವಾದ ದಿನವನ್ನು ನಿರ್ಧರಿಸಿ ಆ ಗ್ರಾಮದಲ್ಲಿಯೇ ಮತ್ತೊಮ್ಮೆ ಗ್ರಾಮ ವಾಸ್ತವ್ಯ ನಡೆಸಲು ನಿರ್ಧರಿಸಲಾಗುವುದು.

ಈ ಸಮಯದಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ಸಮಚಿತ ವರ್ತನಗಳನ್ನು ಪಾಲನೆ ಮಾಡುವಂತೆ ಹಾಗೂ
ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ, ಹೆಚ್ಚಿನ ಮಾಹಿತಿಯನ್ನು ಸುಳ್ಯ ತಾಲೂಕು ಕಚೇರಿಯಿಂದ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

11 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

12 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

12 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

12 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

12 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

14 hours ago