ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’
ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಸದ್ಭಾವನಾ ನಡಿಗೆ ಅ.2ರಂದು ಅಪರಾಹ್ನ 3ಕ್ಕೆ ನಗರದ ಅಂಬೇಡ್ಕರ್ ವೃತ್ತದಿಂದ ಪುರಭವನದ ರಾಜಾಜಿ ಪಾರ್ಕ್ ವರಗೆ ವರೆಗೆ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಉದ್ಘಾಟಿಸಲಿದ್ದು, ಮುಖ್ಯಮಂತ್ರಿ ಕಾರ್ಯದರ್ಶಿ, ಶಾಸಕ ಎಸ್.ಎ ಪೊನ್ನಣ್ಣ ಅವರು ಮುಖ್ಯ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ಈ ಸಂದರ್ಭ ಎಐಸಿಸಿ ಕಾರ್ಯದರ್ಶಿ ಪಿ.ವಿ ಮೋಹನ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಪೂಜಾರಿ, ಶಾಸಕರಾದ ಅಶೋಕ್ ಕುಮಾರ್ ರೈ, ಐವನ್ ಡಿಸೋಜಾ, ಮಾಜಿ ಶಾಸಕ ಜೆ.ಆರ್.ಲೋಬೊ, ವಿಧಾನಸಭಾ ಅಭ್ಯರ್ಥಿಗಳಾದ ಮಿಥುನ್ ರೈ, ಇನಾಯತ್ ಅಲಿ, ಜಿ.ಕೃಷ್ಣಪ್ಪ ಸೇರಿದಂತೆ ಹಿರಿಯ ನಾಯಕರು ಉಪಸ್ಥಿತರಿರಲಿದ್ದಾರೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಇಬ್ರಾಹೀಂ ನವಾಝ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
