ಮಂಗಳೂರು : ನಗರದ ಪದವಿನಂಗಡಿ ಪ್ರದೇಶದ ಕೊರಗಜ್ಜ ಕಟ್ಟೆ ಮುಂಭಾಗದಲ್ಲಿ ಇಂದು ಆಕಸ್ಮಿಕವಾಗಿ ಬೃಹತ್ ಗಾತ್ರದ ಮರ ನೆಲಕ್ಕುರುಳಿದೆ. ಈ ವೇಳೆ ಸ್ಥಳದಲ್ಲೇ ನಿಲ್ಲಿಸಿದ್ದ ಸ್ಕೂಟರ್ ಮೇಲೆ ಮರ ಬಿದ್ದ ಪರಿಣಾಮ ಸ್ಕೂಟರ್‌ಗೆ ಭಾರೀ ಹಾನಿಯಾಗಿದೆ. ಮರ ಬಿದ್ದ ರಭಸಕ್ಕೆ ಸಮೀಪದಲ್ಲಿದ್ದ ವಿದ್ಯುತ್ ಕಂಬವೂ ಮುರಿದು ಬಿದ್ದಿದೆ.
ಸ್ಕೂಟರ್ ಮೇಲೆ ಮರ ಬಿದ್ದ ಪರಿಣಾಮ ಸ್ಕೂಟರ್‌ಗೆ ಭಾರೀ ಹಾನಿಯಾಗಿದೆ. ಅದೃಷ್ಟವಶಾತ್, ಸ್ಕೂಟರ್ ಬಳಿ ಯಾರೂ ಇರದ ಕಾರಣ ಪ್ರಾಣಾಪಾಯ ತಪ್ಪಿದೆ. ಅಲ್ಲದೆ, ಅದೇ ಸಮಯದಲ್ಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಟೆಂಪೋ ಚಾಲಕ ಮರ ಬೀಳುವ ಕ್ಷಣದಲ್ಲಿ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮರ ಕುಸಿತದ ಪರಿಣಾಮವಾಗಿ ಸಮೀಪದ ಕಟ್ಟಡವೊಂದರ ಗಾಜುಗಳು ನುಚ್ಚುನೂರಾಗಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆ ನಡೆದ ತಕ್ಷಣ ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದು, ಸ್ಥಳೀಯರ ಸಹಕಾರದೊಂದಿಗೆ ಮರ ತೆರವುಗೊಳಿಸುವ ಕಾರ್ಯಾಚರಣೆ ಮುಂದುವರೆದಿದೆ. ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವೆಂದು ತಿಳಿದುಬಂದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…