Featured

ಮಂಗಳೂರು : ಆಕಸ್ಮಿಕವಾಗಿ ನೆಲಕ್ಕುರುಳಿದ ಬೃಹತ್ ಗಾತ್ರದ ಮರ ; ದ್ವಿಚಕ್ರ ವಾಹನಕ್ಕೆ ಭಾರೀ ಹಾನಿ – vishwanews24

ಮಂಗಳೂರು : ಆಕಸ್ಮಿಕವಾಗಿ ನೆಲಕ್ಕುರುಳಿದ ಬೃಹತ್ ಗಾತ್ರದ ಮರ ; ದ್ವಿಚಕ್ರ ವಾಹನಕ್ಕೆ ಭಾರೀ ಹಾನಿ

ಮಂಗಳೂರು : ನಗರದ ಪದವಿನಂಗಡಿ ಪ್ರದೇಶದ ಕೊರಗಜ್ಜ ಕಟ್ಟೆ ಮುಂಭಾಗದಲ್ಲಿ ಇಂದು ಆಕಸ್ಮಿಕವಾಗಿ ಬೃಹತ್ ಗಾತ್ರದ ಮರ ನೆಲಕ್ಕುರುಳಿದೆ. ಈ ವೇಳೆ ಸ್ಥಳದಲ್ಲೇ ನಿಲ್ಲಿಸಿದ್ದ ಸ್ಕೂಟರ್ ಮೇಲೆ ಮರ ಬಿದ್ದ ಪರಿಣಾಮ ಸ್ಕೂಟರ್‌ಗೆ ಭಾರೀ ಹಾನಿಯಾಗಿದೆ. ಮರ ಬಿದ್ದ ರಭಸಕ್ಕೆ ಸಮೀಪದಲ್ಲಿದ್ದ ವಿದ್ಯುತ್ ಕಂಬವೂ ಮುರಿದು ಬಿದ್ದಿದೆ.

ಸ್ಕೂಟರ್ ಮೇಲೆ ಮರ ಬಿದ್ದ ಪರಿಣಾಮ ಸ್ಕೂಟರ್‌ಗೆ ಭಾರೀ ಹಾನಿಯಾಗಿದೆ. ಅದೃಷ್ಟವಶಾತ್, ಸ್ಕೂಟರ್ ಬಳಿ ಯಾರೂ ಇರದ ಕಾರಣ ಪ್ರಾಣಾಪಾಯ ತಪ್ಪಿದೆ. ಅಲ್ಲದೆ, ಅದೇ ಸಮಯದಲ್ಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಟೆಂಪೋ ಚಾಲಕ ಮರ ಬೀಳುವ ಕ್ಷಣದಲ್ಲಿ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮರ ಕುಸಿತದ ಪರಿಣಾಮವಾಗಿ ಸಮೀಪದ ಕಟ್ಟಡವೊಂದರ ಗಾಜುಗಳು ನುಚ್ಚುನೂರಾಗಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆ ನಡೆದ ತಕ್ಷಣ ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದು, ಸ್ಥಳೀಯರ ಸಹಕಾರದೊಂದಿಗೆ ಮರ ತೆರವುಗೊಳಿಸುವ ಕಾರ್ಯಾಚರಣೆ ಮುಂದುವರೆದಿದೆ. ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವೆಂದು ತಿಳಿದುಬಂದಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

10 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

11 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

11 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

14 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

14 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

14 hours ago