Featured

ಮಂಗಳೂರು : ಆಕಸ್ಮಿಕ ಕಾಲು ಜಾರಿ ರಸ್ತೆ ಪಕ್ಕದ ಗುಂಡಿಗೆ ಬಿದ್ದ ಮಹಿಳೆ – ಕಾಮಗಾರಿ ಅವ್ಯವಸ್ಥೆ ವಿರುದ್ಧ ಆಕ್ರೋಶ – Vishwanews24

ಮಂಗಳೂರು : ಆಕಸ್ಮಿಕ ಕಾಲು ಜಾರಿ ರಸ್ತೆ ಪಕ್ಕದ ಗುಂಡಿಗೆ ಬಿದ್ದ ಮಹಿಳೆ – ಕಾಮಗಾರಿ ಅವ್ಯವಸ್ಥೆ ವಿರುದ್ಧ ಆಕ್ರೋಶ

ಮಂಗಳೂರು: ನಗರೆದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಅವ್ಯವಸ್ಥೆಯಿಂದ ಕೂಡಿದೆ ಎನ್ನುವುದಕ್ಕೆ ಮತ್ತೊಂದು ನಿದರ್ಶನ ಸಾಕ್ಷಿಯಾಗಿದೆ. ಇಲ್ಲಿನ ಅಂಬೇಡ್ಕರ್ ವೃತ್ತದ ಬಳಿಯ ಕೆಎಂಸಿ ಮುಂಭಾಗದ ರಸ್ತೆ ಪಕ್ಕದ ಗುಂಡಿಗೆ ಮಹಿಳೆಯೊಬ್ಬರು ಬಿದ್ದಿರುವ ಘಟನೆ ನಿನ್ನೆ ನಡೆದಿದೆ.

ಪತಿಯೊಂದಿಗೆ ತೆರಳುತ್ತಿದ್ದ ಮಹಿಳೆಯು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದು, ತಕ್ಷಣ ಸ್ಥಳೀಯರು ಅವರನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ಕಾಮಗಾರಿಯ ಹಿನ್ನೆಲೆಯಲ್ಲಿ ಅಗೆಯಲ್ಪಟ್ಟ ಈ ಗುಂಡಿಯನ್ನು ಮುಚ್ಚದೆ ಇದ್ದಿರುವುದೇ ಘಟನೆಗೆ ಕಾರಣ ಎನ್ನಲಾಗಿದೆ.

ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದ ವಿರುದ್ಧ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವು ದಿನಗಳಿಂದ ಜನನಿಬಿಡ ಪ್ರದೇಶದಲ್ಲಿ ಗುಂಡಿ ತೋಡಲಾಗಿದ್ದು, ಕಾಮಗಾರಿ ಪೂರ್ತಿಗೊಳಿಸದೆ ಬಿಟ್ಟ ಕಾರಣ ಈ ದುರಂತ ಸಂಭವಿಸಿದೆ. ಹಗಲು ಹೊತ್ತಿನಲ್ಲೇ ಈ ದುರಂತ ನಡೆದಿದ್ದು, ರಾತ್ರಿ ವೇಳೆ ಆಕಸ್ಮಿಕವಾಗಿ ಈ ಗುಂಡಿಗೆ ಬಿದ್ದರೆ ಅಂತಹವರ ಪಾಡೇನು ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ನಗರದಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿಗಳು ನಡೆಯುತ್ತಿದ್ದು ಎಲ್ಲಿಯೂ ಕೂಡಾ ಸಾರ್ವಜನಿಕರಿಗೆ ಎಚ್ಚರಿಕೆ ಫಲಕಗಳಾಗಲೀ ಕಂಡು ಬರುತ್ತಿಲ್ಲ. ಅಗೆದು ಇಟ್ಟ ಹೊಂಡಗಳನ್ನು ಮುಚ್ಚುತ್ತಿಲ್ಲ. ತಡೆಗೋಡೆಯನ್ನಾಗಲೀ, ಬ್ಯಾರಿಕೇಡ್‌ಗಳನ್ನಾಗಲೀ ಇಡದಿರುವ ಕಾರಣ ಇಂತಹ ದುರಂತಗಳು ಸಂಭವಿಸಲು ಕಾರಣವಾಗಿದೆ ಎಂದು ಜನತೆ ಆತಂಕ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

8 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago