ಮಂಗಳೂರು: ನಗರೆದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಅವ್ಯವಸ್ಥೆಯಿಂದ ಕೂಡಿದೆ ಎನ್ನುವುದಕ್ಕೆ ಮತ್ತೊಂದು ನಿದರ್ಶನ ಸಾಕ್ಷಿಯಾಗಿದೆ. ಇಲ್ಲಿನ ಅಂಬೇಡ್ಕರ್ ವೃತ್ತದ ಬಳಿಯ ಕೆಎಂಸಿ ಮುಂಭಾಗದ ರಸ್ತೆ ಪಕ್ಕದ ಗುಂಡಿಗೆ ಮಹಿಳೆಯೊಬ್ಬರು ಬಿದ್ದಿರುವ ಘಟನೆ ನಿನ್ನೆ ನಡೆದಿದೆ.
ಪತಿಯೊಂದಿಗೆ ತೆರಳುತ್ತಿದ್ದ ಮಹಿಳೆಯು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದು, ತಕ್ಷಣ ಸ್ಥಳೀಯರು ಅವರನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ಕಾಮಗಾರಿಯ ಹಿನ್ನೆಲೆಯಲ್ಲಿ ಅಗೆಯಲ್ಪಟ್ಟ ಈ ಗುಂಡಿಯನ್ನು ಮುಚ್ಚದೆ ಇದ್ದಿರುವುದೇ ಘಟನೆಗೆ ಕಾರಣ ಎನ್ನಲಾಗಿದೆ.
ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದ ವಿರುದ್ಧ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವು ದಿನಗಳಿಂದ ಜನನಿಬಿಡ ಪ್ರದೇಶದಲ್ಲಿ ಗುಂಡಿ ತೋಡಲಾಗಿದ್ದು, ಕಾಮಗಾರಿ ಪೂರ್ತಿಗೊಳಿಸದೆ ಬಿಟ್ಟ ಕಾರಣ ಈ ದುರಂತ ಸಂಭವಿಸಿದೆ. ಹಗಲು ಹೊತ್ತಿನಲ್ಲೇ ಈ ದುರಂತ ನಡೆದಿದ್ದು, ರಾತ್ರಿ ವೇಳೆ ಆಕಸ್ಮಿಕವಾಗಿ ಈ ಗುಂಡಿಗೆ ಬಿದ್ದರೆ ಅಂತಹವರ ಪಾಡೇನು ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.
ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ನಡೆಯುತ್ತಿದ್ದು ಎಲ್ಲಿಯೂ ಕೂಡಾ ಸಾರ್ವಜನಿಕರಿಗೆ ಎಚ್ಚರಿಕೆ ಫಲಕಗಳಾಗಲೀ ಕಂಡು ಬರುತ್ತಿಲ್ಲ. ಅಗೆದು ಇಟ್ಟ ಹೊಂಡಗಳನ್ನು ಮುಚ್ಚುತ್ತಿಲ್ಲ. ತಡೆಗೋಡೆಯನ್ನಾಗಲೀ, ಬ್ಯಾರಿಕೇಡ್‌ಗಳನ್ನಾಗಲೀ ಇಡದಿರುವ ಕಾರಣ ಇಂತಹ ದುರಂತಗಳು ಸಂಭವಿಸಲು ಕಾರಣವಾಗಿದೆ ಎಂದು ಜನತೆ ಆತಂಕ ವ್ಯಕ್ತಪಡಿಸಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…