ಮಂಗಳೂರು, : ಆಝಾನ್ ವಿರೋಧಿಸಿ ಭಜನೆ ಹಾಗೂ ಸುಪ್ರಭಾತ ಅಭಿಯಾನವನ್ನು ಇಂದು ಮುಂಜಾನೆ ರಾಜ್ಯಾದ್ಯಂತ ಶ್ರೀರಾಮ ಸೇನೆ ಆರಂಭಿಸಿದೆ. ಮಂಗಳೂರು ನಗರದ ಮೂಡುಶೆಡ್ಡೆ ಅಯ್ಯಪ್ಪ ಭಕ್ತ ವೃಂದದ ತಾತ್ಕಾಲಿಕ ಶೆಡ್‌ನಲ್ಲಿ ಕೊರಗಜ್ಜನ ಭಕ್ತಿಗೀತೆ ಮೊಳಗಿದೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಶೆಡ್ಡೆ ಗ್ರಾಮದಲ್ಲಿರುವ ಶಿವಾಜಿ ಪ್ರತಿಮೆ ಬಳಿ ಇರುವ ಅಯ್ಯಪ್ಪ ಭಕ್ತ ವೃಂದದ ತಾತ್ಕಾಲಿಕ ಶೆಡ್ ಮುಂಭಾಗದಲ್ಲಿ ಮೈಕ್ ಅಳವಡಿಸಿದ ಶ್ರೀ ರಾಮಸೇನೆಯ ದ.ಕ ಜಿಲ್ಲಾಧ್ಯಕ್ಷ ಪ್ರದೀಪ್ ಮೂಡುಶೆಡ್ಡೆ ನೇತೃತ್ವದಲ್ಲಿ ಕಾರ್ಯಕರ್ತರು ಬೆಳಿಗ್ಗೆ 5:05 ನಿಮಿಷದಿಂದ 6:00 ಗಂಟೆಯವರೆಗೆ ಕೊರಗಜ್ಜನ ಭಕ್ತಿ ಗೀತೆಗಳನ್ನು ಹಾಕಿದರು.
ಘಟನೆ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಪ್ರತಿಕ್ರಿಯಿಸಿ, ಇಂದು ನಡೆಯುವ ಅಭಿಯಾನದ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ಇತ್ತು. ಜೊತೆಗೆ ಸೂಕ್ತ ಬಂದೋಬಸ್ತ್ ಒದಗಿಸುವಂತೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದರು.
ಅದರಂತೆ ಕಮೀಷನರೇಟ್ ವ್ಯಾಪ್ತಿಯ ಮೂಡುಶೆಡ್ಡೆಯಲ್ಲಿ 40 ನಿಮಿಷಗಳ ಕಾಲ ಭಕ್ತಿಗೀತೆ ಹಾಕಿದ್ದಾರೆ. ಅದರ ಪರಿಶೀಲನೆ ನಡೆಯುತ್ತಿದೆ. ಆಝಾನ್‌ಗೆ ತೊಂದರೆ ಕೊಡುವ ಘಟನೆ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…