Featured

ಮಂಗಳೂರು: ಆಝಾನ್ ವಿರೋಧಿಸಿ ಮುಂಜಾನೆ ಮೊಳಗಿದ ಕೊರಗಜ್ಜನ ಭಕ್ತಿಗೀತೆ – Vishwanews24

ಆಝಾನ್‌ಗೆ ತೊಂದರೆ ಕೊಡುವ ಘಟನೆ ಆಗಿಲ್ಲ : ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌

ಮಂಗಳೂರು, : ಆಝಾನ್ ವಿರೋಧಿಸಿ ಭಜನೆ ಹಾಗೂ ಸುಪ್ರಭಾತ ಅಭಿಯಾನವನ್ನು ಇಂದು ಮುಂಜಾನೆ ರಾಜ್ಯಾದ್ಯಂತ ಶ್ರೀರಾಮ ಸೇನೆ ಆರಂಭಿಸಿದೆ. ಮಂಗಳೂರು ನಗರದ ಮೂಡುಶೆಡ್ಡೆ ಅಯ್ಯಪ್ಪ ಭಕ್ತ ವೃಂದದ ತಾತ್ಕಾಲಿಕ ಶೆಡ್‌ನಲ್ಲಿ ಕೊರಗಜ್ಜನ ಭಕ್ತಿಗೀತೆ ಮೊಳಗಿದೆ.

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಶೆಡ್ಡೆ ಗ್ರಾಮದಲ್ಲಿರುವ ಶಿವಾಜಿ ಪ್ರತಿಮೆ ಬಳಿ ಇರುವ ಅಯ್ಯಪ್ಪ ಭಕ್ತ ವೃಂದದ ತಾತ್ಕಾಲಿಕ ಶೆಡ್ ಮುಂಭಾಗದಲ್ಲಿ ಮೈಕ್ ಅಳವಡಿಸಿದ ಶ್ರೀ ರಾಮಸೇನೆಯ ದ.ಕ ಜಿಲ್ಲಾಧ್ಯಕ್ಷ ಪ್ರದೀಪ್ ಮೂಡುಶೆಡ್ಡೆ ನೇತೃತ್ವದಲ್ಲಿ ಕಾರ್ಯಕರ್ತರು ಬೆಳಿಗ್ಗೆ 5:05 ನಿಮಿಷದಿಂದ 6:00 ಗಂಟೆಯವರೆಗೆ ಕೊರಗಜ್ಜನ ಭಕ್ತಿ ಗೀತೆಗಳನ್ನು ಹಾಕಿದರು.

ಘಟನೆ ಬಗ್ಗೆ ಮಂಗಳೂರು ನಗರ ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌ ಪ್ರತಿಕ್ರಿಯಿಸಿ, ಇಂದು ನಡೆಯುವ ಅಭಿಯಾನದ ಬಗ್ಗೆ ಪೊಲೀಸ್‌ ಇಲಾಖೆಗೆ ಮಾಹಿತಿ ಇತ್ತು. ಜೊತೆಗೆ ಸೂಕ್ತ ಬಂದೋಬಸ್ತ್‌ ಒದಗಿಸುವಂತೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದರು.

ಅದರಂತೆ ಕಮೀಷನರೇಟ್‌ ವ್ಯಾಪ್ತಿಯ ಮೂಡುಶೆಡ್ಡೆಯಲ್ಲಿ 40 ನಿಮಿಷಗಳ ಕಾಲ ಭಕ್ತಿಗೀತೆ ಹಾಕಿದ್ದಾರೆ. ಅದರ ಪರಿಶೀಲನೆ ನಡೆಯುತ್ತಿದೆ. ಆಝಾನ್‌ಗೆ ತೊಂದರೆ ಕೊಡುವ ಘಟನೆ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

8 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

8 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

9 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

9 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

9 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

9 hours ago