ಮಂಗಳೂರು: ಮಂಗಳೂರಿನ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ (55) ಅವರಿಗೆ ” ಸರ್ಕಾರದಿಂದ ಪರಿಹಾರ ನೀಡಲು ಜಿಲ್ಲಾಡಳಿತ ಶಿಫಾರಸು ಮಾಡಲಿದೆ” ಎಂದು ದ. ಕ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ತಿಳಿಸಿದ್ದಾರೆ.
ಸ್ಪೋಟದಿಂದ ಗಾಯಗೊಂಡ ಪುರುಷೋತ್ತಮ ಪೂಜಾರಿ, ಸುಮಾರು 25 ವರ್ಷಗಳಿಂದ ಆಟೋ ರಿಕ್ಷಾ ಚಾಲಕರಾಗಿ ಕೆಲಸ ಮಾಡುತ್ತಿದ್ದು ಇದರಿಂದ ಜೀವನ ನಡೆಸುತ್ತಿದ್ದರು. ಗೋರಿಗುಡ್ಡ ನಿವಾಸಿಯಾಗಿರುವ ಇವರು ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದಾರೆ. ಹಿರಿಯ ಪುತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು , ಕಿರಿಯ ಪುತ್ರಿ ಸಿಎ ಪರೀಕ್ಷೆ ಬರೆದಿದ್ದಾರೆ.
📛 ಬೆಳ್ತಂಗಡಿ: ಕಾಡಿನ ವಿಷ ಪೂರಿತ ಅಣಬೆ ಖಾದ್ಯ ಸೇವನೆ. 🌐 ಒಂದೇ ಕುಟುಂಬದ ಇಬ್ಬರ ಸಾವು – Vishwanews24
ಕುಟುಂಬಕ್ಕೆ ಆಟೋ ರಿಕ್ಷಾವೇ ಆಧಾರವಾಗಿತ್ತು. ಘಟನೆಯಿಂದ ಆಟೋಗೆ ಹಾನಿಯಾಗಿದ್ದು ಮಾತ್ರವಲ್ಲದೇ ತನಿಖೆಯಿಂದ ಸದ್ಯ ಪೊಲೀಸರು ವಾಪಾಸು ಕೊಡುವ ಸಾಧ್ಯತೆ ಇಲ್ಲ. ಇನ್ನೊಂದೆಡೆ ಹಿರಿಯ ಮಗಳಾ ಮದುವೆ ನಿಶ್ವಯವಾಗಿದ್ದು ಇಂತಹ ಸಂದರ್ಭದಲ್ಲೇ ಘಟನೆ ನಡೆದಿರುವುದು ಕುಟುಂಬವನ್ನು ಕಂಗೆಡಿಸಿದೆ.
ಸ್ಪೋಟದಿಂದ ಗಾಯಗೊಂಡ ಆಟೋರಿಕ್ಷಾ ಚಾಲಕ ಪುರುಷೋತ್ತಮರಿಗೆ ಸರ್ಕಾರದಿಂದ ಪರಿಹಾರ ನೀಡಲು ಅವಕಾಶವಿದ್ದು ಹೀಗಾಗಿ ಈ ಬಗ್ಗೆ ಜಿಲ್ಲಾಡಳಿತ ಶಿಫಾರಸು ಮಾಡಲಿದೆ ಎಂದು ಡಿಸಿ ತಿಳಿಸಿದ್ದಾರೆ.
🚫 ಮಂಗಳೂರು – ಆಟೋ ರಿಕ್ಷಾ ಸ್ಫೋಟ ಪ್ರಕರಣಕ್ಕೆ ಟ್ವಿಸ್ಟ್ : ಸ್ಫೋಟಕ್ಕೆ ಬೆಂಗಳೂರು ಲಿಂಕ್
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…