ಮಂಗಳೂರು ಆಟೋ ರಿಕ್ಷಾದಲ್ಲಿ ಸ್ಫೋಟ: ಇನ್ನೆರೆಡು ದಿನಗಳಲ್ಲಿ ಪ್ರಕರಣ NIAಗೆ ಹಸ್ತಾಂತರಿಸಲು ಕ್ರಮ: ಆರಗ ಜ್ಞಾನೇಂದ್ರ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು ಆಟೋ ರಿಕ್ಷಾದಲ್ಲಿ ಸ್ಫೋಟ: ಇನ್ನೆರೆಡು ದಿನಗಳಲ್ಲಿ ಪ್ರಕರಣ NIAಗೆ ಹಸ್ತಾಂತರಿಸಲು ಕ್ರಮ: ಆರಗ ಜ್ಞಾನೇಂದ್ರ

ಮಂಗಳೂರು: ನಗರದ ನಾಗುರಿ ಬಳಿ ಸಂಭವಿಸಿದ್ದ ಆಟೋ ರಿಕ್ಷಾದಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಪೊಲೀಸ್ ತನಿಖೆಯ ಜತೆ ಎನ್‌ಐಎ ಸೇರಿದಂತೆ ಕೇಂದ್ರ ತನಿಖಾ ತಂಡಗಳು ಸಹಕರಿಸುತ್ತಿವೆ. ಪ್ರಕರಣವನ್ನು ಇನ್ನೆರಡು ದಿನಗಳಲ್ಲಿ ಅಧಿಕೃತವಾಗಿ ಎನ್‌ಐಗೆ ಹಸ್ತಾಂತರಿಸುವ ಬಗ್ಗೆ ನಿರ್ಣಯವಾಗಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಸ್ಫೋಟ ಸ್ಥಳಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ ಬಳಿಕ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.

✴️ ಕುಕ್ಕೆ ಸುಬ್ರಹ್ಮಣ್ಯ: ಚಂಪಾಷಷ್ಠಿ ಸಂದರ್ಭ ಅನ್ಯಮತೀಯರ ವ್ಯಾಪಾರ ವಹಿವಾಟು ನಿಷೇಧ..💥 ಬ್ಯಾನರ್ ಅಳವಡಿಸಿದ ಹಿಂದೂ ಜಾಗರಣಾ ವೇದಿಕೆ – Vishwanews24

ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ಆರೋಪಿ ಶಾರೀಕ್ ನ ಆರೋಗ್ಯ ಸುಧಾರಣೆಗೆ ಹೆಚ್ಚಿನ ಗಮನಹರಿಸುವಂತೆ ವೈದ್ಯರೊಂದಿಗೆ ಸೂಚಿಸಿದ್ದೇನೆ. ಎಂಟು ಮಂದಿ ತಜ್ಞ ವೈದ್ಯರು ಆತನಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಆತ ಗುಣಮುಖನಾದ ಮೇಲೆ ಹೆಚ್ಚಿನ ವಿಚಾರಣೆ ನಡೆಯಲಿದೆ. ಆತನ ವಿಚಾರಣೆ ಬಳಿಕ ಕೃತ್ಯದ ಬಗ್ಗೆ ಇನ್ನಷ್ಟು ಮಾಹಿತಿ ಲಭಿಸಲಿದೆ ಎಂದರು.

ಗಾಯಾಳು ರಿಕ್ಷಾ ಚಾಲಕರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರಕಾರವೇ ಭರಿಸಲಿದೆ. ಅವರ ಕುಟುಂಬಕ್ಕೆಆರ್ಥಿಕ ಸಹಾಯ ಕೂಡ ಸರಕಾರದಿಂದ ಒದಗಿಸುವ ಬಗ್ಗೆ ಬೆಂಗಳೂರಿಗೆ ತೆರಳಿದ ಮೇಲೆ ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದರು.

🌐 ಉಡುಪಿ : ಕರಾವಳಿಯಲ್ಲಿ ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿವೆ..🔰 ಸಿಎಫ್​​ಐ, ಪಿಎಫ್​ಐ ಸಂಘಟನೆಗಳಿಂದ ಉಗ್ರರಿಗೆ ಸಹಕಾರ : ರಘುಪತಿ ಭಟ್​​ – Vishwanews24

ಭಯೋತ್ಪಾದನಾ ಕೃತ್ಯಗಳನ್ನು ಸಂಪೂರ್ಣವಾಗಿ ಹತ್ತಿಕ್ಕಲು ಕೇಂದ್ರ, ರಾಜ್ಯ ಸರಕಾರಗಳು ಗಮನ ಹರಿಸಿವೆ. ಇತ್ತೀಚಿನ ವರ್ಷಗಳಲ್ಲಿ ಇಂತಹ ಕೃತ್ಯಗಳು ಕಡಿಮೆಯಾಗಿವೆ ಎಂದರು.

Leave a Reply