ಮಂಗಳೂರು: ನಗರದ ನಾಗುರಿ ಬಳಿ ಸಂಭವಿಸಿದ್ದ ಆಟೋ ರಿಕ್ಷಾದಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಪೊಲೀಸ್ ತನಿಖೆಯ ಜತೆ ಎನ್‌ಐಎ ಸೇರಿದಂತೆ ಕೇಂದ್ರ ತನಿಖಾ ತಂಡಗಳು ಸಹಕರಿಸುತ್ತಿವೆ. ಪ್ರಕರಣವನ್ನು ಇನ್ನೆರಡು ದಿನಗಳಲ್ಲಿ ಅಧಿಕೃತವಾಗಿ ಎನ್‌ಐಗೆ ಹಸ್ತಾಂತರಿಸುವ ಬಗ್ಗೆ ನಿರ್ಣಯವಾಗಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಸ್ಫೋಟ ಸ್ಥಳಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ ಬಳಿಕ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.
ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ಆರೋಪಿ ಶಾರೀಕ್ ನ ಆರೋಗ್ಯ ಸುಧಾರಣೆಗೆ ಹೆಚ್ಚಿನ ಗಮನಹರಿಸುವಂತೆ ವೈದ್ಯರೊಂದಿಗೆ ಸೂಚಿಸಿದ್ದೇನೆ. ಎಂಟು ಮಂದಿ ತಜ್ಞ ವೈದ್ಯರು ಆತನಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಆತ ಗುಣಮುಖನಾದ ಮೇಲೆ ಹೆಚ್ಚಿನ ವಿಚಾರಣೆ ನಡೆಯಲಿದೆ. ಆತನ ವಿಚಾರಣೆ ಬಳಿಕ ಕೃತ್ಯದ ಬಗ್ಗೆ ಇನ್ನಷ್ಟು ಮಾಹಿತಿ ಲಭಿಸಲಿದೆ ಎಂದರು.
ಗಾಯಾಳು ರಿಕ್ಷಾ ಚಾಲಕರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರಕಾರವೇ ಭರಿಸಲಿದೆ. ಅವರ ಕುಟುಂಬಕ್ಕೆಆರ್ಥಿಕ ಸಹಾಯ ಕೂಡ ಸರಕಾರದಿಂದ ಒದಗಿಸುವ ಬಗ್ಗೆ ಬೆಂಗಳೂರಿಗೆ ತೆರಳಿದ ಮೇಲೆ ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದರು.
ಭಯೋತ್ಪಾದನಾ ಕೃತ್ಯಗಳನ್ನು ಸಂಪೂರ್ಣವಾಗಿ ಹತ್ತಿಕ್ಕಲು ಕೇಂದ್ರ, ರಾಜ್ಯ ಸರಕಾರಗಳು ಗಮನ ಹರಿಸಿವೆ. ಇತ್ತೀಚಿನ ವರ್ಷಗಳಲ್ಲಿ ಇಂತಹ ಕೃತ್ಯಗಳು ಕಡಿಮೆಯಾಗಿವೆ ಎಂದರು.
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…
ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ - ಫಲ್ಗುಣಿ ನದಿಯಲ್ಲಿ ಶೋಧ…
ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…
ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…