ಮಂಗಳೂರು : ರಾಷ್ಟ್ರೀಯ ಹೆದ್ದಾರಿ 75ರ ಪಂಪ್‌ವೆಲ್ ಸಮೀಪದ ನಾಗುರಿ ಎಂಬಲ್ಲಿ ಶನಿವಾರ ಸಂಜೆ ಆಟೊ ರಿಕ್ಷಾದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ವೇಳೆ ರಿಕ್ಷಾದಲ್ಲಿದ್ದ ಆರೋಪಿ ಪ್ರಯಾಣಿಕನ ಗುರುತನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಮುಹಮ್ಮದ್ ಶಾರಿಕ್(24) ಆರೋಪಿಯಾಗಿದ್ದಾನೆ. ಈತ 2020ರಲ್ಲಿ ಮಂಗಳೂರು ನಗರದಲ್ಲಿ ಕಂಡುಬಂದ ಪ್ರಚೋದನಕಾರಿ ಗೋಡೆ ಬರಹ ಪ್ರಕರಣದ ಆರೋಪಿಗಳಲ್ಲಿ ಓರ್ವನಾಗಿದ್ದ ಎಂದು ಎಡಿಜಿಪಿ ಅಲೋಕ್ ಕುಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಆರೋಪಿಯಿಂದ ವಶಪಡಿಸಿಕೊಂಡ ಮೊಬೈಲ್ ಫೋನ್ ಹಾಗೂ ಕುಟುಂಬದವರು ಆತ ಶಾರಿಕ್ ಎಂದು ಗುರುತಿಸಿರುವುದಾಗಿ ಎಡಿಜಿಪಿ ತಿಳಿಸಿದ್ದಾರೆ. ಈತನ ಮೇಲೆ ಮಂಗಳೂರಿನ ಪೂರ್ವ ಮತ್ತು ಉತ್ತರ ಪೊಲೀಸ್ ಠಾಣೆ ಹಾಗೂ ಶಿವಮೊಗ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಎರಡು ಪ್ರಕರಣದಲ್ಲಿ ದಸ್ತಗಿರಿಯಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಎಂದು ಅವರು ಮಾಹಿತಿ ನೀಡಿದ್ದಾರೆ.
ಶಾರಿಕ್ ವಿರುದ್ಧ 2022ರ ಸೆ.19ರಂದು ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ದಾಖಲಾದ UNLAWFUL ACTIVITIES (PREVENTION) ACT 1967 ಪ್ರಕರಣ ದಾಖಲಾಗಿದ್ದು, ಇದರಲ್ಲಿ ಈತ 1ನೇ ಆರೋಪಿಯಾಗಿದ್ದಾನೆ. ಪ್ರಕರಣ ದಾಖಲಾದ ನಂತರ ಶಾರಿಕ್ ಅಲ್ಲಿಂದ ತಲೆಮರೆಸಿಕೊಂಡು ಮೈಸೂರಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದನು. ನ.19ರಂದು ಮೈಸೂರಿನಿಂದ ಹೊರಟಿದ್ದ ಶಾರಿಕ್ ಹೂಣಸೂರು, ಮಡಿಕೇರಿ, ಮತ್ತೂರು, ಬಿ.ಸಿ.ರೋಡ್ ಮೂಲಕ ಮಂಗಳೂರಿಗೆ ಆಗಮಿಸಿ ನಗರ ಹೊರವಲಯದಲ್ಲಿ ಬಸ್ಸಿನಿಂದ ಇಳಿದು ನಂತರ ಆಟೋದಲ್ಲಿ ಪಂಪವೆಲ್ ಕಡೆಗೆ ಹೋಗುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ ಎಂದು ಎಡಿಜಿಪಿ ತಿಳಿಸಿದ್ದಾರೆ.
ಮೈಸೂರಿನಲ್ಲಿ ಆರೋಪಿ ವಾಸವಿದ್ದ ಬಾಡಿಗೆ ಮನೆಯಿಂದ ಸಲ್ಫೆಕ್ಸ್ ಸಲ್ಫರ್ ಪೌಡರ್, ನಟ್ ಬೋಲ್ಡ್‌ಗಳು, ಸರ್ಕ್ಯೂಟ್‌ಗಳು, ಮಲ್ಟಿ ಫಂಕ್ಷನ್ ಡಿಲೆ ಟೈಮರ್, ಗ್ರೈಂಡರ್, ಮಿಕ್ಸರ್, ಮ್ಯಾಚ್ ಬಾಕ್ಸ್, ಬ್ಯಾಟರಿ, ಮೈಕ್ಯಾನಿಕಲ್ ಟೈಮರ್, ಆಧಾರ್ ಕಾರ್ಡ್, ಅಲ್ಯೂಮಿನಿಯಂ ಫೈಲ್ ಸಿಮ್ ಕಾರ್ಡ್‌ಗಳು, ಮೊಬೈಲ್‌ನ ಡಿಸ್‌ಪ್ಲೆಗಳು, ಸ್ಫೋಟಕಕ್ಕೆ ಬಳಸುವ ವಿವಿಧ ಬಗೆಯ ಕೆಮಿಕಲ್ಸ್‌ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಡಿಜಿಪಿ ಹೇಳಿದ್ದಾರೆ.
ಸುಟ್ಟ ಗಾಯಗೊಂಡಿರುವ ಆರೋಪಿ ಗುಣಮುಖನಾದ ನಂತರ ಆತನನ್ನು ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ಮಾಡಲಾಗುವುದು. ಈ ಪ್ರಕರಣದ ತನಿಖೆಗೆ ಎಸಿಪಿ ಪರಮೇಶ್ವರ ಹೆಗಡೆಯವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದವರು ಹೇಳಿದರು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…