Featured

ಮಂಗಳೂರು : ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ : ಇಂಜಿನಿಯರ್ ಗೆ 4 ವರ್ಷ ಜೈಲು ಶಿಕ್ಷೆ ಮತ್ತು 26.5 ಲಕ್ಷ ರೂ. ದಂಡ – Vishwanews24

ಮಂಗಳೂರು : ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ : ಇಂಜಿನಿಯರ್ ಗೆ 4 ವರ್ಷ ಜೈಲು ಶಿಕ್ಷೆ ಮತ್ತು 26.5 ಲಕ್ಷ ರೂ. ದಂಡ.

ಮಂಗಳೂರು : ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ್ದ ಪ್ರಕರಣದಲ್ಲಿ ಮೂಲ್ಕಿ ಮುಲ್ಕಿ ನಗರ ಪಂಚಾಯತ್ ಜೂನಿಯರ್ ಇಂಜಿನಿಯರ್ ಗೆ ಶಿಕ್ಷೆ ವಿಧಿಸಿ ಮಂಗಳೂರಿನ 3 ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ನೀಡಿದೆ.

ಇಂಜಿನಿಯರ್ ಪದ್ಮನಾಭ ಎನ್ .ಕೆ. ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಸಂಪಾದಿಸಿದ್ದು ದಾಳಿ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಇವರ ವಿರುದ್ದ 2015 ರಲ್ಲಿ ಪ್ರಕರಣ ದಾಖಲಾಗಿತ್ತು. 4 ವರ್ಷ ಜೈಲು ಶಿಕ್ಷೆ ಮತ್ತು 26 ಲಕ್ಷದ 50 ಸಾವಿರ ರೂ. ದಂಡ ಮತ್ತು ದಂಡ ಕಟ್ಟಲು ವಿಫಲನಾದರೆ ಮತ್ತೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿ ನ್ಯಾಯಾಧೀಶ ಬಿ.ಬಿ.ಜಕಾತಿ ಅಂತಿಮ ತೀರ್ಪು ನೀಡಿದ್ದಾರೆ.

ಆರೋಪಿ ಪ್ರಸ್ತುತ ಮೂಡುಬಿದಿರೆ ಪುರಸಭೆಯಲ್ಲಿ ಎಂಜಿನಿಯರ್ ಆಗಿದ್ದಾನೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

20 minutes ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

38 minutes ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

2 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

2 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

2 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

2 hours ago