ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ ಪ್ರಕರಣದಲ್ಲಿ ನ್ಯಾಯಾಲಯವು ವಲಯ ಅರಣ್ಯಾಧಿಕಾರಿಗೆ 5 ವರ್ಷಗಳ ಸಾದಾ ಸಜೆ ಮತ್ತು 1.50 ಲ.ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಬೆಳ್ತಂಗಡಿ ಸಹ್ಯಾದ್ರಿ ವಲಯದ ವಲಯ ಅರಣ್ಯಾಧಿಕಾರಿಯಾಗಿದ್ದು ಪ್ರಸ್ತುತ ನಿವೃತ್ತರಾಗಿರುವ ಮಂಗಳೂರು ದೇರೆಬೈಲ್ ಕೊಂಚಾಡಿ ನಿವಾಸಿ ಎಸ್.ರಾಘವ ಪಾಟಾಳಿ ಶಿಕ್ಷೆಗೊಳಗಾದ ಅಪರಾಧಿ.
ಈತನ ವಿರುದ್ಧ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ 2011ರ ಜು.21ರಂದು ಭ್ರಷ್ಟಾಚಾರ ತಡೆ ಕಾಯಿದೆ 1988ರಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ(ವಿಶೇಷ) ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ.ಜಕಾತಿ ಅವರು ಶುಕ್ರವಾರದಂದು ಅಪರಾಧಿಗೆ 5 ವರ್ಷಗಳ ಸಾದಾ ಸಜೆ ಹಾಗೂ 1.50 ಕೋ.ರೂ. ದಂಡ, ದಂಡ ಪಾವತಿಸಲು ವಿಫಲನಾದರೆ ಮತ್ತೆ 1 ವರ್ಷ ಹೆಚ್ಚುವರಿ ಸಾದಾ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಪೊಲೀಸ್ ನಿರೀಕ್ಷಕ ಉದಯ ಎಂ.ನಾಯಕ್ ದೂರು ದಾಖಲಿಸಿದ್ದರು. ಪೊಲೀಸ್ ಉಪಾಧೀಕ್ಷಕ ವಿಟuಲ್‌ದಾಸ್ ಪೈ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಲೋಕಾಯುಕ್ತ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪಾಡಿ ಸರಕಾರದ ಪರವಾಗಿ ವಾದ ಮಂಡಿಸಿದ್ದರು.
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…