ಮಂಗಳೂರು: ವ್ಯಕ್ತಿಯೊಬ್ಬರ ಕ್ರೆಡಿಟ್ ಕಾರ್ಡ್‌ನಿಂದ 1.55 ಲ.ರೂ.ಗಳನ್ನು ಅನಧಿಕೃತವಾಗಿ ವರ್ಗಾಯಿಸಿ ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ದೂರುದಾರರು ಐಸಿಐಸಿಐ ಕ್ರೆಡಿಟ್ ಕಾರ್ಡ್ ಹೊಂದಿದ್ದು, ಅವರ ಮೊಬೈಲ್‌ಗೆ ಸೆ. 10ರಂದು ಹಲವು ಒಟಿಪಿಗಳ ಸಂದೇಶ ಬಂದಿದ್ದವು. ಅಲ್ಲದೆ ಅಪರಿಚಿತ ಸಂಖ್ಯೆಯಿಂದ ಕರೆ ಬಂದಿತ್ತು.
ಅವರು ಯಾವುದೇ ಕರೆ ಸ್ವೀಕರಿಸದೆ ಕೂಡಲೇ ತಮ್ಮ ಮೊಬೈಲ್‌ನಿಂದ ಐಸಿಐಸಿಐ ಆ್ಯಪ್ ತೆರೆದು ಕ್ರೆಡಿಟ್ ಕಾರ್ಡ್ ಬ್ಲಾಕ್ ಮಾಡಿದ್ದರು. ಅಲ್ಲದೆ ಐಸಿಐಸಿಐ ಕ್ರೆಡಿಟ್ ಕಾರ್ಡ್‌ನ ಕಸ್ಟಮರ್ ಕೇರ್‌ಗೆ ಕರೆ ಮಾಡಿ ಕಾರ್ಡ್ ಬ್ಲಾಕ್ ಮಾಡಿರುವ ಬಗ್ಗೆ ಖಚಿತಪಡಿಸಿಕೊಂಡಿದ್ದರು.
ಕಾರ್ಡ್ ಬ್ಲಾಕ್ ಆಗಿರುವ ಬಗ್ಗೆ ಈ ಮೇಲ್ ಕೂಡ ಕಸ್ಟಮರ್ ಕೇರ್‌ನವರಿಂದ ಬಂದಿತ್ತು. ಮರುದಿನ ರಾತ್ರಿ ಆ್ಯಪ್ ಮೂಲಕ ಕ್ರೆಡಿಟ್ ಕಾರ್ಡ್‌ನ ಸ್ಟೇಟಸ್ ನೋಡಿದಾಗ 1,60,401 ರೂ. ಔಟ್‌ಸ್ಟಾಂಡಿಂಗ್ ಇರುವುದಾಗಿ ತೋರಿಸಿತು. ಐಸಿಐಸಿಐ ಕ್ರೆಡಿಟ್ ಕಾರ್ಡ್ ನ ಕಸ್ಟಮರ್ ಕೇರ್ ಕರೆ ಮಾಡಿ ವಿಚಾರಿಸಿದಾಗ ಅನಧಿಕೃತ ಹಣ ವರ್ಗಾವಣೆ ಆದ ಬಗ್ಗೆ ದೂರು ಸ್ವೀಕರಿಸಿಕೊಂಡು ಸ್ವೀಕೃತಿ ನಂಬರ್ ಅನ್ನು ಮೌಖಿಕವಾಗಿ ನೀಡಿರುತ್ತಾರೆ. ಈ ರೀತಿಯಾಗಿ ಯಾರೋ ಅಪರಿಚಿತ ವ್ಯಕ್ತಿ ಐಸಿಐಸಿಐ ಕ್ರೆಡಿಟ್ ಕಾರ್ಡ್ ನಿಂದ ಅನಧಿಕೃತವಾಗಿ ಒಟ್ಟು 1,55,000/- ರೂಗಳನ್ನು ಆನ್ ಲೈನ್ ಮುಖಾಂತರ ಮೋಸದಿಂದ ವರ್ಗಾಯಿಸಿಕೊಂಡಿರುತ್ತಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…