ಮಂಗಳೂರು: ನಗರದ ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬಂದಿ ಮೇಲೆ ಆಪದ್ಬಾಂಧವ ಸಂಘಟನೆಯ ಆಸೀಫ್ ಅನುಚಿತ ವರ್ತನೆ ತೋರಿ ಹಲ್ಲೆ ದೂರು ದಾಖಲಾಗಿದ್ದು, ಪ್ರಕರಣದ ದಾಖಲಿಸಿದ ಪೊಲೀಸರು ಆಸಿಫ್ ಅವರನ್ನು ಬಂಧಿಸಿದ್ದಾರೆ.
ಆಸಿಫ್ ಬುಧವಾರ ಸಂಜೆ ವೆನ್ಲಾಕ್ ಆಸ್ಪತ್ರೆಗೆ ಇಬ್ಬರು ರೋಗಿಗಳನ್ನು ಕರೆತಂದಿದ್ದರು. ಹೊರಗಡೆ ಆಂಬುಲೆನ್ಸ್ ನಿಲ್ಲಿಸಿ ರೋಗಿಗಳನ್ನು ಒಳಗಡೆ ಕರೆದೊಯ್ದು ಅಡ್ಮಿಶನ್ ಮಾಡುತ್ತಿದ್ದಾಗ ಸೆಕ್ಯುರಿಟಿ ಗಾರ್ಡ್ ಸಿಬಂದಿ ವಾಹನವನ್ನು ಹೊರಗೆ ಒಯ್ಯುವಂತೆ ಸೂಚಿಸಿದ್ದಾರೆ. ಆದರೆ ರೋಗಿಗಳನ್ನು ಅಡ್ಮಿಶನ್ ಮಾಡುತ್ತಿದ್ದೇನೆ, ಸ್ವಲ್ಪ ಹೊತ್ತು ಕಾಯಿರಿ ಎಂದು ಆಸಿಫ್ ಹೇಳಿದ್ದಾರೆ.
ಸ್ವಲ್ಪ ಹೊತ್ತಾದರೂ ಆಂಬುಲೆನ್ಸ್ ತೆರವು ಮಾಡದ್ದಕ್ಕೆ ಮಹಿಳಾ ಸಿಬಂದಿ ವಾಹನ ತೆಗೆಯುವಂತೆ ಹೇಳಿದ್ದು, ಆಸಿಫ್ ಮತ್ತು ಮಹಿಳಾ ಸಿಬಂದಿ ನಡುವೆ ಮಾತಿಗೆ ಮಾತಾಗಿತ್ತು. ಈ ವೇಳೆ, ಸಿಬಂದಿಯನ್ನು ದೂಡಿ ಕೈಮಾಡಿದ್ದಾರೆ ಎನ್ನಲಾಗುತ್ತಿದ್ದು, ಈ ಬಗ್ಗೆ ಆಸ್ಪತ್ರೆ ಕಡೆಯಿಂದ ಪೊಲೀಸರಿಗೆ ದೂರು ನೀಡಲಾಗಿತ್ತು. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಆಸಿಫ್ ಅವರನ್ನು ಕರೆದೊಯ್ದಿದ್ದಾರೆ. ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…