Featured

ಮಂಗಳೂರು : ಆಳಸಮುದ್ರ ಮೀನುಗಾರಿಕೆ ಆರಂಭ; ಮಲ್ಪೆಯಲ್ಲಿ ಕಡಲಿಗಿಳಿಯದ ದೋಣಿಗಳು – vishwanews24

ಮಂಗಳೂರು : ಆಳಸಮುದ್ರ ಮೀನುಗಾರಿಕೆ ಆರಂಭ

ಮಲ್ಪೆಯಲ್ಲಿ ಇನ್ನೂ ಸಮುದ್ರಕ್ಕಿಳಿಯದ ಮೀನುಗಾರಿಕಾ ದೋಣಿಗಳು

ಮಂಗಳೂರು/ಉಡುಪಿ: ಮೀನುಗಾರಿಕೆ ನಿಷೇಧ ತೆರವಾಗಿರುವ ಮೂರನೇ ದಿನವಾದ ಸೋಮವಾರ ಮಂಗಳೂರಿನಲ್ಲಿ ಆಳ ಸಮುದ್ರ ಮೀನುಗಾರಿಕೆ ಚಟುವಟಿಕೆಗಳು ಪುನರಾರಂಭಗೊಂಡಿದ್ದು, ಸುಮಾರು 100 ಟ್ರಾಲ್ ಬೋಟ್‌ಗಳು ಹಳೆ ಮಂಗಳೂರು ಮೀನುಗಾರಿಕಾ ಬಂದರಿನಿಂದ ಉತ್ತಮ ಮೀನುಗಾರಿಕೆ ಋತುವಿನ ನಿರೀಕ್ಷೆಯೊಂದಿಗೆ ಸಮುದ್ರದತ್ತ ಪ್ರಯಾಣ ಬೆಳೆಸಿವೆ.

ಕಳೆದ ಎರಡು ದಿನಗಳಿಂದ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಮತ್ತು ಬಲವಾದ ಗಾಳಿಯಿಂದಾಗಿ ಈ ಬೋಟ್‌ಗಳು ಬಂದರಿನಲ್ಲೇ ನಿಲ್ಲಿಸಲಾಗಿತ್ತು. ಡೀಸೆಲ್ ಮತ್ತು ಐಸ್ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದರೂ, ಪ್ರತಿಕೂಲ ಹವಾಮಾನದಿಂದಾಗಿ ಸಮುದ್ರಕ್ಕೆ ಇಳಿಯಲು ಸಾಧ್ಯವಾಗಿರಲಿಲ್ಲ. ಸೋಮವಾರ ಹವಾಮಾನದಲ್ಲಿ ಸ್ವಲ್ಪ ಮಟ್ಟಿನ ಸುಧಾರಣೆ ಕಂಡುಬಂದ ಹಿನ್ನೆಲೆಯಲ್ಲಿ ಟ್ರಾಲ್ ಬೋಟ್‌ಗಳು ಒಂದೊಂದಾಗಿ ಅಳಿವೆ ಬಾಗಿಲಿನ ಮೂಲಕ ಸಮುದ್ರಕ್ಕಿಳಿದಿವೆ.

ಉತ್ತಮ ಮೀನುಗಾರಿಕೆ ನಿರೀಕ್ಷೆಯೊಂದಿಗೆ ಸಮುದ್ರಕ್ಕೆ ತೆರಳಿರುವ ಈ ಬೋಟ್‌ಗಳು ಸುಮಾರು 10 ದಿನಗಳ ಬಳಿಕ ಮರಳಿ ಬಂದರಿಗೆ ಆಗಮಿಸುವ ನಿರೀಕ್ಷೆಯಿದೆ. ಆಳ ಸಮುದ್ರದಲ್ಲಿ ಮೀನು ಸಂಪತ್ತು ಲಭ್ಯತೆಗೆ ಅನುಗುಣವಾಗಿ ಇನ್ನಷ್ಟು ಬೋಟ್‌ಗಳು ಸಮುದ್ರಕ್ಕಿಳಿಯಲಿವೆ ಎಂದು ಮೀನುಗಾರರು ತಿಳಿಸಿದ್ದಾರೆ.

ಮಲ್ಪೆಯಲ್ಲಿ ಇನ್ನೂ ಸಮುದ್ರಕ್ಕಿಳಿಯದ ಮೀನುಗಾರಿಕಾ ದೋಣಿಗಳು
ಇನ್ನೊಂದೆಡೆ, ಸರ್ಕಾರ ಆಗಸ್ಟ್ 1ರಿಂದ ಯಾಂತ್ರೀಕೃತ ಮೀನುಗಾರಿಕೆಗೆ ವಿಧಿಸಿದ್ದ ನಿಷೇಧವನ್ನು ತೆರವುಗೊಳಿಸಿದ್ದರೂ, ಮಲ್ಪೆ ಮೀನುಗಾರಿಕಾ ಬಂದರಿನಿಂದ ಯಾವುದೇ ವರ್ಗದ ಮೀನುಗಾರಿಕಾ ದೋಣಿಗಳೂ ಇನ್ನೂ ಸಮುದ್ರಕ್ಕೆ ಇಳಿದಿಲ್ಲ.

ಸಮುದ್ರ ಇನ್ನೂ ಪ್ರಕ್ಷುಬ್ಧವಾಗಿದ್ದು, ಬಲವಾದ ಗಾಳಿಯಿಂದಾಗಿ ಆಳ ಸಮುದ್ರದಲ್ಲಿ ಭಾರಿ ಅಲೆಗಳು ಏಳುತ್ತಿವೆ. ಈ ಪರಿಸ್ಥಿತಿಯಲ್ಲಿ ಮೀನುಗಾರಿಕಾ ಬಲೆಗಳನ್ನು ಹಾಕಲು ಸಾಧ್ಯವಾಗದ ಕಾರಣ ದೋಣಿಗಳನ್ನು ಸಮುದ್ರಕ್ಕಿಳಿಸಲು ಮೀನುಗಾರರು ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago