ಮಂಗಳೂರು, : ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವರು ಯೋಗಭ್ಯಾಸದ ಸಂದರ್ಭ ಬಿದ್ದು ತಲೆಗೆ ಏಟಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಕರ್ ಆರೋಗ್ಯ ವಿಚಾರಣೆಗೆ ಯಾರೂ ಆಸ್ಪತ್ರೆಗೆ ಬರಬೇಡಿ ಎಂದು ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಮಾತನಾದಿದ ಅವರು, “ಆಸ್ಕರ್ ಆರೋಗ್ಯ ವಿಚಾರಣೆ ಮಾಡಲು ಕಾರ್ಯಕರ್ತರು, ಅಭಿಮಾನಿಗಳು ಸೇರಿದಂತೆ ಸಾವಿರಾರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದು, ಆಸ್ಕರ್ ಅವರ ಆರೋಗ್ಯಕ್ಕೆ ತೊಂದರೆಯಾಗುತ್ತಿದ್ದು, ಅವರ ವೈದ್ಯಕೀಯ ಚಿಕಿತ್ಸೆಗೂ ತೊಂದರೆಗಳು ಉಂಟಾಗುತ್ತಿದೆ. ಜೊತೆಗೆ ಕೊರೊನಾ ಹಿನ್ನಲೆಯಲ್ಲೂ ಆಸ್ಪತ್ರೆಗೆ ಸಾವಿರಾರು ಮಂದಿ ಆಗಮಿಸುವುದು ಸರಿಯಲ್ಲ” ಎಂದಿದ್ದಾರೆ.
ಇನ್ನು “ವೈದ್ಯರು ಕೂಡ ಸಲಹೆ ನೀಡಿದ್ದು, ಅಭಿಮಾನಿಗಳು ಇದ್ದಲ್ಲಿಯೇ ಆಸ್ಕರ್ ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ” ಎಂದು ಮನವಿ ಮಾಡಿಕೊಂಡಿದ್ದಾರೆ.
ಆಸ್ಕರ್ ಫೆರ್ನಾಂಡೀಸ್ ಅವರಿಗೆ ಗಂಭೀರ ಸ್ಥಿತಿಯಲ್ಲಿರುವಾಗ ಡಯಾಲಿಸಿಸ್ ಮಾಡಲು ಸಾಧ್ಯವಾಗಿರಲಿಲ್ಲ. ಆದರೆ ಬುಧವಾರ ಅವರ ಕೈಯಲ್ಲಿ ಚಲನೆ ಕಂಡು ಬಂದಿದ್ದು, ವೈದ್ಯರು ಅವರಿಗೆ ಡಯಾಲಿಸಿಸ್ ಮಾಡಲು ಮುಂದಾಗಿದ್ದಾರೆ. ಅದರಂತೆ ಬುಧವಾರ ಒಂದು ಹಂತದ ಡಯಾಲಿಸಿಸ್ ನಡೆದಿದ್ದು, ಡಯಾಲಿಸಿಸ್ ಚಿಕಿತ್ಸೆ ಪೂರ್ಣಗೊಂಡ ನಂತರವೇ ಸರ್ಜರಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇನ್ನು ಹಿರಿಯ ನಾಯಕರಾದ ದಿಗ್ವಿಜಯ ಸಿಂಗ್, ಅಶೋಕ್ ಗೆಹ್ಲೋಟ್ ಅವರು ಆಸ್ಕರ್ ಕುಟುಂಬಕ್ಕೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎನ್ನಲಾಗಿದೆ.
ಎಂಆರ್‌ಪಿಎಲ್ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…