Featured

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ

ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್

ಮಂಗಳೂರು: ಆಹಾರ ಸುರಕ್ಷತೆ ಕಾಯ್ದುಕೊಳ್ಳಲು ಪ್ರತಿ ಬಾರಿ ಅಧಿಕಾರಿಗಳು ರೈಡ್ ನಡೆಸುವುದು ಸಾಧ್ಯವಿಲ್ಲ. ಹೀಗಾಗಿ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್‌ಗಳನ್ನು ರಚಿಸುವ ಚಿಂತನೆಯಿದೆ ಎಂದು ಸಚಿವ ಯು.ಟಿ. ಖಾದರ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 60 ವರ್ಷ ಮೇಲ್ಪಟ್ಟವರು ಸೇರಿದಂತೆ ಸಾಮಾಜಿಕ ಕೆಲಸ ಮಾಡಲು ಆಸಕ್ತಿ ಇರುವವರನ್ನು ಈ ತಂಡಗಳಲ್ಲಿ ಸೇರಿಸಿ, ಆರೋಗ್ಯ ಮತ್ತು ಆಹಾರ ಸುರಕ್ಷತೆ ಕುರಿತು ಜನಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುವುದು ಎಂದರು.

ಕೋಳಿ ಮಾಂಸವನ್ನು ಎಷ್ಟು ದಿನ ಸಂಗ್ರಹಿಸಬಹುದು ಎಂಬುದಕ್ಕೆ ದೇಶದಲ್ಲಿ ನಿಯಮಗಳಿವೆ. ಈ ಕುರಿತು ಗ್ರಾಹಕರಿಗೆ ಸ್ಪಷ್ಟ ಮಾಹಿತಿ ನೀಡುವ ಫಲಕಗಳನ್ನು ಹಾಕಬೇಕು ಎಂದರು. ಆಹಾರ ಪದಾರ್ಥಗಳ ಗುಣಮಟ್ಟ ಮತ್ತು ಸಕ್ಕರೆ ಪ್ರಮಾಣದ ವಿಚಾರದಲ್ಲೂ ಸೂಕ್ತ ನಿಯಮಗಳನ್ನು ರೂಪಿಸುವ ಅಗತ್ಯವಿದೆ. ಈ ಬಗ್ಗೆ ಕೇಂದ್ರ ಸರ್ಕಾರವೂ ಗಮನಹರಿಸಬೇಕು ಎಂದರು.

ಕೃತಕ ಪನ್ನೀರ್, ಬಣ್ಣ, ಅಜಿನಮೊಟೊ ವಿರುದ್ಧ ಕ್ರಮ
ಕೃತಕ ಪನ್ನೀರ್ ವಿಚಾರದಲ್ಲೂ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಸಸ್ಯಾಹಾರಿ ಆಹಾರದ ಬೇಡಿಕೆ ಹೆಚ್ಚಿರುವ ಕಡೆಗಳಲ್ಲಿ ಕೃತಕ ಪನ್ನೀರ್ ಬಳಕೆಯ ಬಗ್ಗೆ ದೂರುಗಳು ಬಂದಿದೆ, ರಾಜ್ಯದಲ್ಲಿ ಅದನ್ನು ನಿಷೇಧಿಸಲಾಗಿದೆ. ಕೃತಕ ಆಹಾರ ಪದಾರ್ಥಗಳ ವಿರುದ್ಧ ಕ್ರಮ ಮುಂದುವರಿಯಲಿದೆ. ಕೃತಕ ಬಣ್ಣವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಜಿನಮೊಟೊವನ್ನು ಸಂಪೂರ್ಣವಾಗಿ ನಿಷೇಧಿಸುವುದು ಪ್ರಾಯೋಗಿಕವಾಗಿ ಸಾಧ್ಯವಿಲ್ಲದಿದ್ದರೂ, ಅದರ ಬಳಕೆಯ ಬಗ್ಗೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಖಾದರ್ ಹೇಳಿದರು.

ಗುಟ್ಕಾ ಹಾಗೂ ಪಾನ್‌ಮಸಾಲಾದಲ್ಲಿ ನಿಕೋಟಿನ್ ಸೇರಿಸಿ ಮಾರಾಟ ಮಾಡುವ ಕಂಪನಿಗಳ ವಿರುದ್ಧವೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ವಿಮಾನಗಳಿಗೆ ಆಹಾರ ಹಾಗೂ ಇತರ ವಸ್ತುಗಳ ಸರಬರಾಜಿಗೆ ಸಂಬಂಧಿಸಿದಂತೆ ಸರಬರಾಜು ಕಂಪನಿಗಳೊಂದಿಗೆ ಚರ್ಚೆ ಮಾಡಲಾಗುವುದು. ನಕಲಿ ಔಷಧ ಜಾಲದ ವಿರುದ್ಧ ಎಸ್‌ಐಟಿ ತನಿಖೆ ಮಾಡಲಾಗುತ್ತದೆ. ಹೋಟೆಲ್‌ಗಳು, ಔಷಧ ಮಳಿಗೆಗಳು ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಈಗಾಗಲೇ 400ಕ್ಕೂ ಅಧಿಕ ದೂರುಗಳು ಬಂದಿವೆ ಎಂದು ಖಾದರ್ ಮಾಹಿತಿ ನೀಡಿದರು.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

1 hour ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

1 hour ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

1 hour ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

2 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

5 hours ago

ಉಡುಪಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್‌ಓಗೆ ಮನವಿ – vishwanews24

ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್‌ಓಗೆ ಮನವಿ ಉಡುಪಿ: ಉಡುಪಿ…

6 hours ago