ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಂಗಳೂರಿನ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಆ.31ರ ಗುರುವಾರ ಸಂಜೆ 4 ಗಂಟೆಗೆ ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸುವರು.
ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ಸಂಗಪ್ಪ ತಂಗಡಿಗಿ ಗೌರವ ಉಪಸ್ಥಿತಿ ವಹಿಸುವರು. ಶಾಸಕರಾದ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದರಾದ ವೀರೇಂದ್ರ ಹೆಗ್ಗಡೆ, ಶಾಸಕರಾದ ಡಾ. ಭರತ್ ಶೆಟ್ಟಿ ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಯು, ಭಾಗೀರಥಿ ಮುರುಳ್ಯ, ಉಮಾನಾಥ ಎ. ಕೋಟ್ಯಾನ್, ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಶಾಸಕರಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಎಸ್.ಎಲ್. ಭೋಜೇಗೌಡ, ಪ್ರತಾಪ ಸಿಂಹ ನಾಯಕ್, ಕೆ. ಮಂಜುನಾಥ ಭಂಡಾರಿ, ಮಹಾಪೌರರಾದ ಜಯನಂದ ಅಂಚನ್ ಭಾಗವಹಿಸುವರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ಹಾಗೂ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಮ್‍ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು.
ಮಂಗಳೂರಿನ ಸಂತ ಆಗ್ನೇಸ್ ಕಾಲೇಜಿನ ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ ಅವರು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯ ಸಂದೇಶವನ್ನು ನೀಡುವರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…