ಮಂಗಳೂರು: ಕೇಂದ್ರ ಸರ್ಕಾರದ PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಬಿಡುಗಡೆಯಾದ 25.11 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನೆರವೇರಿಸಲಿದ್ದಾರೆ.
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್ (PMABHIM) ಯೋಜನೆಯಡಿ ಮಂಜೂರಾದ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ವೆನ್ಲಾಕ್ ಆಸ್ಪತೆಯ ನೂತನ ಶಸ್ತ್ರಚಿಕಿತ್ಸಾ ವಿಭಾಗದ ಮುಂಭಾಗದಲ್ಲಿರುವ ಅತ್ತಾವರದ ಐ.ಎಂ.ಎ ಭವನದಲ್ಲಿ ಆಯೋಜಿಸಲಾಗಿದೆ.
ಮಧ್ಯಾಹ್ನ 01:10ಕ್ಕೆ ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಅವರು ಈ ಬಹುಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.ಮಂಗಳೂರಿನಲ್ಲಿ ನಡೆಯುವ ಈ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ಡಿ. ವೇದವ್ಯಾಸ ಕಾಮತ್, ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ಡಾ. ಭರತ್ ವೈ ಶೆಟ್ಟಿ, ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಸೇರಿ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಅಧಿಕಾರಿಗಳು ಮುಂತಾದವರು ಭಾಗವಹಿಸಲಿದ್ದಾರೆ ಎಂದು ಸಂಸದರ ಕಾರ್ಯಾಲಯವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…