Featured

ಮಂಗಳೂರು: ಇಂದು ಸಂಜೆಯಿಂದ  ಮುಂದಿನ ಆದೇಶದವರೆಗೆ ಪ್ರಮೋದ್ ಮುತಾಲಿಕ್ ಅವರಿಗೆ ದ.ಕ. ಜಿಲ್ಲೆಗೆ ಪ್ರವೇಶ ನಿರ್ಬಂಧ-ಡಿಸಿ ಆದೇಶ -Vishwanews24

ಮಂಗಳೂರು: ಇಂದು ಸಂಜೆಯಿಂದ  ಮುಂದಿನ ಆದೇಶದವರೆಗೆ ಪ್ರಮೋದ್ ಮುತಾಲಿಕ್ ಅವರಿಗೆ ದ.ಕ. ಜಿಲ್ಲೆಗೆ ಪ್ರವೇಶ ನಿರ್ಬಂಧ-ಡಿಸಿ ಆದೇಶ

ಮಂಗಳೂರು  : ದ.ಕ. ಜಿಲ್ಲೆಯ ವಿವಿಧೆಡೆ ಪ್ರಕ್ಷುಬ್ದ ಪರಿಸ್ಥಿತಿ ಹಿನ್ನೆಲೆಯಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಜುಲೈ 28ರ ಸಂಜೆ 4 ಗಂಟೆಯಿಂದ ಮುಂದಿನ ಆದೇಶದವರೆಗೆ ದ.ಕ. ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ.

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರ ಮನೆಗೆ ಹಾಗೂ ಇತರ ಕಡೆಗಳಿಗೆ ಪ್ರಮೋದ್ ಮುತಾಲಿಕ್ ಅವರು ಭೇಟಿ ನೀಡುತ್ತಿರುವುದಾಗಿ ಮಾಹಿತಿ ಬಂದಿದೆ. ಆದರೆ ಈ ಹಿಂದೆ ಅವರು ಭೇಟಿ ನೀಡಿದ ಸ್ಥಳಗಳಲ್ಲಿ ಉದ್ರೇಕಕಾರಿ ಭಾಷಣ ಮಾಡಿ ಹಿಂದೂ ಸಮುದಾಯದ ಜನರ ಕೋಮು ಭಾವನೆ ಕೆರಳಿಸಿರುವ ಮತ್ತು ಕೋಮ ಸೌಹಾರ್ದ ಹದಗೆಡಿಸಿದ ಪ್ರಕರಣಗಳಿರುವುದರಿಂದ ದ.ಕ. ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಗೆ ಪ್ರವೇಶಿಸಿದ್ದಲ್ಲಿ ಉದ್ರೇಕಕಾರಿ ಹೇಳಿಕೆ ನೀಡಿದ್ದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದಕ್ಕೆ ಭಂಗವುಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅವರಿಗೆ ದ.ಕ. ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯೊಳಗೆ ಪ್ರವೇಶ ನಿರ್ಬಂಧಿಸುವಂತೆ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಕೋರಿದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.

ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ, ಸುಳ್ಯ ತಾಲೂಕುಗಳಲ್ಲಿ ಜುಲೈ 28ರ ಸಂಜೆ 4 ಗಂಟೆಯಿಂದ ಮುಂದಿನ ಆದೇಶದವರೆಗೆ ಪ್ರಮೋದ್ ಮುತಾಲಿಕ್ ಅವರಿಗೆ ಪ್ರವೇಶ ನಿರ್ಬಂಧಿಸಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

 

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

8 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

9 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

9 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

9 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

9 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago