ಮಂಗಳೂರು : ಕೊರೊನಾ ಸೊಂಕು ನಿಯಂತ್ರಣಕ್ಕೆ ಮುಂಜಾಗೃತಾ ಕ್ರಮವಾಗಿ ಮಂಗಳೂರು ನಗರದಾದ್ಯಂತ ಇಂದು ಸಂಜೆ 6 ರಿಂದ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಿಗ್ಗೆ 6 ಗಂಟೆಯವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.
ಇನ್ನು ಹೊಸ ವರ್ಷಚರಣೆಯ ನೆಪದಲ್ಲಿ ಐದಕ್ಕಿಂದ ಹೆಚ್ಚು ಜನ ಸೇರುವುದು, ಸಾರ್ವಜನಿಕ ಸ್ಥಳ, ರಸ್ತೆ, ಬೀಚ್ ಹಾಗೂ ಮೈದಾನಗಳಲ್ಲಿ ಹೊಸ ವರ್ಷಾಚರಣೆ, ಜನ ಸೇರಿಸಿ ಹೊಸ ವರ್ಷಆಚರಣೆ ಮಾಡುವುದಕ್ಕೆ ಸಂಪೂರ್ಣ ನಿರ್ಭಂಧ ಹೇರಲಾಗಿದೆ. ವಸತಿ ಸಮುಚ್ಚಯ, ಖಾಸಗಿ ಕ್ಲಬ್‌ಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆಗೆ ಅವಕಾಶವಿಲ್ಲ. ಹೊಟೇಲ್, ಬಾರ್, ಪಬ್, ಮಾಲ್‌ಗಳಲ್ಲಿ ಡಿಜೆ, ಮ್ಯೂಸಿಕಲ್ ನೈಟ್‌ಗಳಿಗೆ ನಿಬಂಧ, ಇವುಗಳಲ್ಲಿ ಪ್ರತಿನಿತ್ಯದ ವ್ಯವಹಾರಕಷ್ಟೇ ಅನುಮತಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ನಡುವೆ ಈಗಾಗಲೇ ಹೊಸವರ್ಷ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಕಡಲ ತೀರ ಪ್ರದೇಶಗಳಲ್ಲಿ ಅತೀ ಹೆಚ್ಚು ಜನಸಂದಣಿ ಸೇರುವುದರಿಂದ ಸೋಂಕು ಹರಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಲ್ಲೆಯ ಉಳ್ಳಾಲ, ಸೋಮೇಶ್ವರ, ಮೊಗವೀರಪಟ್ಣ, ಪಣಂಬೂರು, ತಣ್ಣೀರುಬಾವಿ, ಸಸಿಹಿತ್ಲು ಮತ್ತು ಸುರತ್ಕಲ್ ಬೀಚ್‍ಗಳಿಗೆ/ ಎಲ್ಲಾ ಕಡಲ ಕಿನಾರೆಗಳಿಗೆ ಡಿಸೆಂಬರ್ 31 ರಂದು ಮಧ್ಯಾಹ್ನ 12 ಗಂಟೆಯಿಂದ ಜನವರಿ 2 ರಂದು ಮಧ್ಯಾಹ್ನ 12 ಗಂಟೆಯವರೆಗೆ ಸ್ಥಳೀಯ ಹಾಗೂ ಸಾಂಪ್ರದಾಯಿಕ ಮೀನುಗಾರರನ್ನು ಹೊರತು ಪಡಿಸಿ ಇತರೇ ಯಾವುದೇ ಪ್ರವಾಸಿಗರು ಹಾಗೂ ಸಾರ್ವಜನಿಕರು ಪ್ರವೇಶಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…