Featured

ಮಂಗಳೂರು: ಇಡೀ ರಾತ್ರಿ ನಡೆಯುವ ಯಕ್ಷಗಾನ ಮೇಳಕ್ಕೆ ಕಟ್ಟುನಿಟ್ಟಿನ ಕ್ರಮ ಪಾಲಿಸಲು ಡಿಸಿ ಸೂಚನೆ – vishwanews24

ಮಂಗಳೂರು: ಇಡೀ ರಾತ್ರಿ ನಡೆಯುವ ಯಕ್ಷಗಾನ ಮೇಳಕ್ಕೆ ಕಟ್ಟುನಿಟ್ಟಿನ ಕ್ರಮ ಪಾಲಿಸಲು ಡಿಸಿ ಸೂಚನೆ

ಮಂಗಳೂರು : ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳಗಳ ಬಯಲಾಟದ ವೇಳೆಯಲ್ಲಿ ಶಬ್ದಮಾಲಿನ್ಯ ನಿಯಮಾವಳಿ, ರಾಜ್ಯ ಹೈಕೋರ್ಟ್ ಆದೇಶದ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಎಲ್ಲಾ ರೀತಿಯ ನಿಯಮಗಳನ್ನು ಪಾಲಿಸುವುದು ದೇವಸ್ಥಾನ ಆಡಳಿತ ಮಂಡಳಿಯ ಸಂಪೂರ್ಣ ಜವಾಬ್ದಾರಿಯಾಗಿದೆ ಎಂದು ಆದೇಶದಲ್ಲಿ ಉಲ್ಲೇಖವಾಗಿದೆ.

2022ರ ನವೆಂಬರ್ 15ರಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಹೊರಡಿಸಿದ್ದ ಆದೇಶದಲ್ಲಿ ಯಕ್ಷಗಾನವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ 10 ಗಂಟೆಯಿಂದ ರಾತ್ರಿ 12.30ರವರೆಗೆ ವಿಸ್ತರಣೆ ಮಾಡಲಾಗಿತ್ತು. ಆದರೆ ಜಿಲ್ಲಾಧಿಕಾರಿಯವರ ಆದೇಶವನ್ನು ಪ್ರಶ್ನಿಸಿ ಕೃಷ್ಣಕುಮಾರ್ ಎಂಬುವವರು ಹೈಕೋರ್ಟ್ ನ ಮೆಟ್ಟಿಲೇರಿದ್ದರು. ಈ ಕುರಿತಂತೆ 2023ರ ನವೆಂಬರ್ 28ರಂದು ಹೈಕೋರ್ಟ್ ಹೊರಡಿಸಿದ್ದ ಆದೇಶದಲ್ಲಿ ಯಕ್ಷಗಾನ ಮೇಳದ ಪ್ರದರ್ಶನ ಅವಧಿ ಕುರಿತಂತೆ ಅರ್ಜಿದಾರರು ಸೂಕ್ತ ಪ್ರಸ್ತಾವನೆ ವಹಿಸಿ ಜಿಲ್ಲಾಧಿಕಾರಿ ಅಗತ್ಯ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದರೂ ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ.

ಜನವರಿ 14ರ ಬಳಿಕ ರಾತ್ರಿ ಪೂರ್ತಿ ಯಕ್ಷಗಾನ ನಡೆಸಲು ದೇವಸ್ಥಾನ ಆಡಳಿತ ಸಮಿತಿ ಈಗಾಗಲೇ ತೀರ್ಮಾನಿಸಿದ್ದು, ಈ ಕುರಿತಂತೆ ಪತ್ರ ಹೊರಡಿಸಿದೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

11 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

12 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago