ಮಂಗಳೂರು : ಇನಾಯತ್ ಆಲಿ ಮಂಗಳೂರು ಉತ್ತರ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಇದರ ಬೆನ್ನಲ್ಲೇ ಟಿಕೆಟ್ ಆಕಾಂಕ್ಷಿಯಾಗಿದ್ದ ಮೊಯ್ದೀನ್ ಬಾವ ಬಂಡಾಯ ಎದ್ದಿದ್ದಾರೆ. ತನ್ನ ಟಿಕೆಟ್ ತಪ್ಪಲು ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರೇ ಕಾರಣ ಎಂದು ಬಾವ ಕಿಡಿಕಾರಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರು ಮಂಗಳೂರು ಉತ್ತರ ಕ್ಷೇತ್ರದ ಸೀಟನ್ನು ಹಣಕ್ಕಾಗಿ ಮಾರಾಟ ಮಾಡಿದ್ದಾರೆ. ರಾಹುಲ್ ಗಾಂಧಿ ನಡೆಸಿದ ಪಕ್ಷದ ಸರ್ವೆಯಲ್ಲಿ 78 ಶೇ. ಮತಗಳು ನನ್ನ ಪರವಾಗಿ ಬಂದಿದ್ದವು. ಇನಾಯತ್ ಆಲಿಗೆ ಕೇವಲ 7 ಶೇ. ಮತ ಸಿಕ್ಕಿದ್ದವು. ಈ ಇನಾಯತ್ ಆಲಿ ಯಾರೆಂದೇ ಕ್ಷೇತ್ರದಲ್ಲಿ ಜನರಿಗೆ ತಿಳಿದಿಲ್ಲ. ಡಿಸಿಸಿ ಕಚೇರಿಗೆ ಇವರು ಹೋಗಿದ್ದಾರೆಯೇ.. ಕೇವಲ ತನ್ನ ವ್ಯವಹಾರ ಪಾಲುದಾರ ಎಂಬ ನೆಪದಲ್ಲಿ ಡಿಕೆಶಿ ಟಿಕೆಟ್ ಮಾರಿದ್ದಾರೆ.
ನನ್ನ ಟಿಕೆಟ್ ತಪ್ಪಿಸಿದ್ದು ಡಿಕೆ ಶಿವಕುಮಾರ್ ಅವರೇ, ಖಚಿತವಾಗಿ ಹೇಳುತ್ತೇನೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಗಿಸಲು ಡಿಕೆಶಿ ಹೊರಟಿದ್ದಾರೆ. ಮಂಗಳೂರು ಉತ್ತರದಲ್ಲಿ ಕಾಂಗ್ರೆಸ್ ಸೋಲಿಸಲು ಡಿಕೆಶಿ ಟಿಕೆಟ್ ಕೊಟ್ಟಿದ್ದಾರೆ. ನಾನು ಮಂಗಳೂರು ಉತ್ತರ ಕ್ಷೇತ್ರದಲ್ಲಿಯೇ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಇಲ್ಲಿ ಹಣಕ್ಕಾಗಿ ಓಟು ಮಾರುವ ಜನ ಇಲ್ಲ. ಹಣ ಖರ್ಚು ಮಾಡಲಿ. ಇಲ್ಲಿ ಇನಾಯತ್ ಗೆದ್ದರೆ ಫಲಿತಾಂಶ ದಿನವೇ ನನ್ನ ತಲೆ ಕೊಡಲು ಸಿದ್ಧನಿದ್ದೇನೆ ಎಂದು ಮಾಜಿ ಶಾಸಕ ಮೊಯ್ದೀನ್ ಬಾವ ಸವಾಲು ಹಾಕಿದ್ದಾರೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…