Featured

ಮಂಗಳೂರು : ಇನ್ನು ಮುಂದೆ ಸಾರ್ವಜನಿಕ ರಸ್ತೆಯಲ್ಲಿ ನಮಾಜ್‌ ಮಾಡುವುದಕ್ಕೆ ಅವಕಾಶ ನೀಡುವುದಿಲ್ಲ : ಮಸೀದಿ ಆಡಳಿತ ಮಂಡಳಿ ಸ್ಪಷ್ಟನೆ – vishwanews24

* ನಮಾಜ್ ಮುಗಿಯುವ ಸಮಯದಲ್ಲಿ ಬಂದ ಯಾರೋ ಹೊರಗಿನವರು, ರಸ್ತೆಯಲ್ಲೇ ಪ್ರಾರ್ಥನೆ ಸಲ್ಲಿಸಿದ್ದಾರೆ..

* ನಾವೂ ಆಗ ನಮಾಜ್‌ನಲ್ಲಿ ತೊಡಗಿದ್ದರಿಂದ ಆಗ ಈ ವಿಚಾರ ನಮ್ಮ ಗಮನಕ್ಕೆ ಬಂದಿರಲಿಲ್ಲ..

* ಇಂತಹ ಘಟನೆ ಮರುಕಳಿಸುವುದನ್ನು ತಡೆಯಲು ಭದ್ರತಾ ಸಿಬ್ಬಂದಿಯನ್ನೂ ನೇಮಿಸುತ್ತೇವೆ..

* ನಮಾಜ್‌ನಿಂದ ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ

* ಸ್ಪಷ್ಟನೆ ನೀಡಿದ ಮಸೀದಿ ಆಡಳಿತ ಮಂಡಳಿ

ಮಂಗಳೂರು : ಮಂಗಳೂರಿನ ಕಂಕನಾಡಿಯ ಮಸೀದಿ ಪಕ್ಕದ ರಸ್ತೆಯಲ್ಲಿ ನಮಾಜ್ ಮಾಡಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಇದೀಗ ಮಸೀದಿಯ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದ್ದು, ನಮಾಜ್ ಮುಗಿಯುವ ಸಮಯದಲ್ಲಿ ಬಂದ ಯಾರೋ ಹೊರಗಿನವರು, ರಸ್ತೆಯಲ್ಲೇ ಪ್ರಾರ್ಥನೆ ಸಲ್ಲಿಸಿದ್ದಾರೆ. ಅವರು ಸಮೀಪದ ಆಸ್ಪತ್ರೆಗೆ ಬಂದವರು ಅಥವಾ ಬೇರೆ ಕಡೆಯ ಕೂಲಿ ಕಾರ್ಮಿಕರು ಇರಬಹುದು. ನಾವೂ ಆಗ ನಮಾಜ್‌ನಲ್ಲಿ ತೊಡಗಿದ್ದರಿಂದ ಆಗ ಈ ವಿಚಾರ ನಮ್ಮ ಗಮನಕ್ಕೆ ಬಂದಿರಲಿಲ್ಲ ಎಂದಿದ್ದಾರೆ.

ಕಂಕನಾಡಿ ಮಸೀದಿ ಮುಂಭಾಗದಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಕೆಲವರು ನಮಾಜ್‌ ಮಾಡಿದ್ದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಮಾಡಿದ ಆರೋಪದ ಮೇರೆಗೆ ಪೊಲೀಸರು ಅಪರಿಚಿತರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಬಗ್ಗೆ ಮಸೀದಿ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದ್ದು, ಇನ್ನು ಮುಂದೆ ಸಾರ್ವಜನಿಕ ರಸ್ತೆಯಲ್ಲಿ ನಮಾಜ್‌ ಮಾಡುವುದಕ್ಕೆ ಅವಕಾಶ ನೀಡುವುದಿಲ್ಲ. ಇಂತಹ ಘಟನೆ ಮರುಕಳಿಸುವುದನ್ನು ತಡೆಯಲು ಭದ್ರತಾ ಸಿಬ್ಬಂದಿಯನ್ನೂ ನೇಮಿಸುತ್ತೇವೆ’ ಎಂದು ಇಲ್ಲಿಯ ಕಂಕನಾಡಿ ಮಸೀದಿಯ ಆಡಳಿತ ಸಮಿತಿಯ ಜಂಟಿ ಕಾರ್ಯದರ್ಶಿ ಅಬ್ದುಲ್ ಸಮದ್‌ ಹೇಳಿದ್ದಾರೆ.

ಶುಕ್ರವಾರ ಸಂಜೆ ಈ ವಿಚಾರ ನಮ್ಮ ಗಮನಕ್ಕೆ ಬಂತು. ಶನಿವಾರವೇ ಮಸೀದಿಯ ಆಡಳಿತ ಸಮಿತಿ ಈ ವಿಚಾರವನ್ನು ಚರ್ಚಿಸಿ ಕ್ರಮ ವಹಿಸಿದೆ. ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗುವ ಮುನ್ನವೇ ಕದ್ರಿ ಪೊಲೀಸ್‌ ಠಾಣೆಯಲ್ಲಿ ನಾವು ಸ್ಪಷ್ಟನೆ ನೀಡಿದ್ದೇವೆ. ಇಂತಹ ಘಟನೆ ಮರುಕಳಿಸದಂತೆ ನೊಡಿಕೊಳ್ಳುವ ಜವಾಬ್ದಾರಿ ನಮ್ಮದು ಎಂಬ ಭರವಸೆಯನ್ನೂ ನೀಡಿದ್ದೇವೆ’ ಎಂದು ತಿಳಿಸಿದ್ದಾರೆ.

‘ಇದರಲ್ಲಿ ವಿವಾದ ಏನೂ ಇಲ್ಲ. ನಮಾಜ್‌ ವಿಚಾರದಲ್ಲಿ ವಿವಾದ ಮಾಡುವ ಅಗತ್ಯವೂ ನಮಗಿಲ್ಲ. ನಮಾಜ್‌ನಿಂದ ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ’ ಎಂದು ಅವರು ಹೇಳಿದ್ದಾರೆ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

7 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

1 day ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

1 day ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

1 day ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

1 day ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

1 day ago