Featured

ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಹುಡುಗಿಗೆ ಲೈಕ್ ಕೊಟ್ಟಿದ್ದಕ್ಕೆ ನಿಶ್ಚಿತಾರ್ಥ  ಮಾಡಿಕೊಂಡಿದ್ದ ಯುವತಿಯಿಂದ ತರಾಟೆ ; ಮನನೊಂದು ಯುವಕ ಆತ್ಮಹತ್ಯೆ  – vishwanews24

ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಹುಡುಗಿಗೆ ಲೈಕ್ ಕೊಟ್ಟಿದ್ದಕ್ಕೆ ನಿಶ್ಚಿತಾರ್ಥ  ಮಾಡಿಕೊಂಡಿದ್ದ ಯುವತಿಯಿಂದ ತರಾಟೆ ; ಮನನೊಂದು ಯುವಕ ಆತ್ಮಹತ್ಯೆ

ಮಂಗಳೂರು: ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದ ಹುಡುಗಿಗೆ ಲೈಕ್ ಕೊಟ್ಟಿದ್ದಕ್ಕೆ ಯುವಕನೊಂದಿಗೆ ನಿಶ್ಚಿತಾರ್ಥ  ಮಾಡಿಕೊಂಡಿದ್ದ ಯುವತಿ ಆತನನ್ನು ತರಾಟೆಗೆ ತೆಗೆದುಕೊಂಡಿದ್ದು, ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪೂಂಜಾಲಕಟ್ಟೆಯ ಕುಕ್ಕಿಪ್ಪಾಡಿ ಎಂಬಲ್ಲಿ ನಡೆದಿದೆ.

ಚೇತನ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಚೇತನ್‌ಗೆ ಕುಂದಾಪುರದ ಚೈತನ್ಯ ಎಂಬ ಯುವತಿ ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದಳು. ಬಳಿಕ ಪ್ರೀತಿಸಿ 8 ತಿಂಗಳ ಹಿಂದೆ ಇವರಿಬ್ಬರಿಗೂ ನಿಶ್ಚಿತಾರ್ಥವಾಗಿತ್ತು. ಜ.21ರಂದು ಚೇತನ್ ತನ್ನ ಪರಿಚಯದ ಯುವತಿಗೆ ಇನ್ಸ್ಟಾಗ್ರಾಂನಲ್ಲಿ ಲೈಕ್ ನೀಡಿದ್ದ. ಇದನ್ನು ಪ್ರಶ್ನಿಸಲು ನಿಶ್ಚಿತಾರ್ಥ ಮಾಡಿಕೊಂಡ ಯುವತಿ ಚೇತನ್ ಮನೆಗೆ ಬಂದಿದ್ದಳು. ಈ ವೇಳೆ ಚೇತನ್ ತಾಯಿ ಮನೆಯಲ್ಲಿ ಇರಲಿಲ್ಲ. ಚೇತನ್ ಓರ್ವನೇ ಇದ್ದ. ಲೈಕ್ ನೀಡಿದ್ದಕ್ಕೆ ಯುವತಿ ಚೇತನ್‌ನನ್ನು ತರಾಟೆಗೆ ತೆಗೆದುಕೊಂಡಿದ್ದಳು. ಇದರಿಂದ ಮನನೊಂದ ಚೇತನ್ ಯುವತಿ ಮನೆಯಲ್ಲಿ ಇರುವ ಸಂದರ್ಭದಲ್ಲೇ ಮನೆಯೊಳಗೆ ತೆರಳಿ ಮನೆಯ ಮೇಲ್ಛಾವಣಿಗೆ ಬಟ್ಟೆ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬಳಿಕ ಚೇತನ್ ತಾಯಿಗೆ ಚೈತನ್ಯ ಕರೆ ಮಾಡಿ ಮಲಗಿದ್ದಾತ ಏಳುತ್ತಿಲ್ಲ ಎಂದು ಹೇಳಿ ಕರೆಸಿಕೊಂಡಿದ್ದಾಳೆ. ಬಳಿಕ ಮನೆಯ ಮೆಲ್ಛಾವಣಿಯಲ್ಲಿ ನೇಣು ಬಿಗಿದ ಕುಣಿಕೆ ಸಿಕ್ಕಿದೆ. ನೇಣು ಬಿಗಿದ ಬಳಿಕ ಚೇತನ್‌ನನ್ನು ಯುವತಿಯೇ ಕೆಳಗೆ ಇಳಿಸಿದ್ದಳು. ಘಟನೆ ಸಂಬಂಧ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

16 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

16 hours ago