ಮಂಗಳೂರು: ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದ ಹುಡುಗಿಗೆ ಲೈಕ್ ಕೊಟ್ಟಿದ್ದಕ್ಕೆ ಯುವಕನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿ ಆತನನ್ನು ತರಾಟೆಗೆ ತೆಗೆದುಕೊಂಡಿದ್ದು, ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪೂಂಜಾಲಕಟ್ಟೆಯ ಕುಕ್ಕಿಪ್ಪಾಡಿ ಎಂಬಲ್ಲಿ ನಡೆದಿದೆ.
ಚೇತನ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಚೇತನ್‌ಗೆ ಕುಂದಾಪುರದ ಚೈತನ್ಯ ಎಂಬ ಯುವತಿ ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದಳು. ಬಳಿಕ ಪ್ರೀತಿಸಿ 8 ತಿಂಗಳ ಹಿಂದೆ ಇವರಿಬ್ಬರಿಗೂ ನಿಶ್ಚಿತಾರ್ಥವಾಗಿತ್ತು. ಜ.21ರಂದು ಚೇತನ್ ತನ್ನ ಪರಿಚಯದ ಯುವತಿಗೆ ಇನ್ಸ್ಟಾಗ್ರಾಂನಲ್ಲಿ ಲೈಕ್ ನೀಡಿದ್ದ. ಇದನ್ನು ಪ್ರಶ್ನಿಸಲು ನಿಶ್ಚಿತಾರ್ಥ ಮಾಡಿಕೊಂಡ ಯುವತಿ ಚೇತನ್ ಮನೆಗೆ ಬಂದಿದ್ದಳು. ಈ ವೇಳೆ ಚೇತನ್ ತಾಯಿ ಮನೆಯಲ್ಲಿ ಇರಲಿಲ್ಲ. ಚೇತನ್ ಓರ್ವನೇ ಇದ್ದ. ಲೈಕ್ ನೀಡಿದ್ದಕ್ಕೆ ಯುವತಿ ಚೇತನ್‌ನನ್ನು ತರಾಟೆಗೆ ತೆಗೆದುಕೊಂಡಿದ್ದಳು. ಇದರಿಂದ ಮನನೊಂದ ಚೇತನ್ ಯುವತಿ ಮನೆಯಲ್ಲಿ ಇರುವ ಸಂದರ್ಭದಲ್ಲೇ ಮನೆಯೊಳಗೆ ತೆರಳಿ ಮನೆಯ ಮೇಲ್ಛಾವಣಿಗೆ ಬಟ್ಟೆ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬಳಿಕ ಚೇತನ್ ತಾಯಿಗೆ ಚೈತನ್ಯ ಕರೆ ಮಾಡಿ ಮಲಗಿದ್ದಾತ ಏಳುತ್ತಿಲ್ಲ ಎಂದು ಹೇಳಿ ಕರೆಸಿಕೊಂಡಿದ್ದಾಳೆ. ಬಳಿಕ ಮನೆಯ ಮೆಲ್ಛಾವಣಿಯಲ್ಲಿ ನೇಣು ಬಿಗಿದ ಕುಣಿಕೆ ಸಿಕ್ಕಿದೆ. ನೇಣು ಬಿಗಿದ ಬಳಿಕ ಚೇತನ್‌ನನ್ನು ಯುವತಿಯೇ ಕೆಳಗೆ ಇಳಿಸಿದ್ದಳು. ಘಟನೆ ಸಂಬಂಧ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…