ಮಂಗಳೂರು: ಇನ್ ಸ್ಟಾಗ್ರಾಮ್ ಪೇಜ್ ನಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿರುವ ಆರೋಪದಲ್ಲಿ ಯುವಕನೋರ್ವನನ್ನು ಮಂಗಳೂರು ನಗರ ಸಿ.ಇ.ಎನ್ ಅಪರಾಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮಲವಂತಿಗೆಯ ಕಿಲ್ಲೂರು ಮನೆ ನಿವಾಸಿ ಮುಹಮ್ಮದ್ ಕೈಫ್(22) ಬಂಧಿತ ಆರೋಪಿ.
Karavali_tigers ಎಂಬ Instagram ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪದಲ್ಲಿ ಕೈಫ್ ವಿರುದ್ಧ ಮಂಗಳೂರು ನಗರ ಸಿ.ಇ.ಎನ್ ಅಪರಾಧ ಠಾಣೆಯಲ್ಲಿ ಜುಲೈ 19ರಂದು ಪ್ರಕರಣ ದಾಖಲಾಗಿತ್ತು.
ತಾಂತ್ರಿಕ ಸಾಕ್ಷ್ಯಗಳ ಮುಖಾಂತರ ಪತ್ತೆ ಮಾಡಿ, ಆರೋಪಿ ತಮಿಳುನಾಡಿಲ್ಲಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ ಪೊಲೀಸರು ಅಲ್ಲಿಗೆ ತೆರಳಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
Karavali_tigers ಎಂಬ ಪೇಜ್ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲೂ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…