Featured

ಮಂಗಳೂರು : ಇರುವೆ ಬಾಧೆಗೊಳಗಾದ ಪಿಲಿಕುಳ ಜೈವಿಕ ಉದ್ಯಾನವನದ ಹಾವು ಸುರಕ್ಷಿತ :ಸ್ಪಷ್ಟನೆ ನೀಡಿದ ಪಶುಪಾಲನಾ ವೈದ್ಯಾಧಿಕಾರಿ – Vishwanews24

ಮಂಗಳೂರು : ಇರುವೆ ಬಾಧೆಗೊಳಗಾದ ಪಿಲಿಕುಳ ಜೈವಿಕ ಉದ್ಯಾನವನದ ಹಾವು ಸುರಕ್ಷಿತ :ಸ್ಪಷ್ಟನೆ ನೀಡಿದ ಪಶುಪಾಲನಾ ವೈದ್ಯಾಧಿಕಾರಿ

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದೊಳಗಿರುವ ಹಾವಿನ ಗೂಡೊಂದರಲ್ಲಿ ಇರುವೆಗಳ ಗುಂಪು ಹಾವನ್ನು ಕಚ್ಚುತ್ತಿರುವ ವೀಡಿಯೋ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಚಾರವು ತಿಳಿದು ಬಂದಿದೆ.

ವಿಷಯ ತಿಳಿದ ಕೂಡಲೇ ಪ್ರಾಧಿಕಾರದ ಆಯುಕ್ತರು ಸಂಬಂಧಪಟ್ಟ ಹಿರಿಯ ವೈಜ್ಞಾನಿಕ ಅಧಿಕಾರಿ, ಪಶುಪಾಲನಾ ವೈದ್ಯಾಧಿಕಾರಿ ಮತ್ತು ಬಯಾಲಾಜಿಸ್ಟ್ ಜೊತೆಗೂಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಪರಿಶೀಲನೆ ವೇಳೆ ಇರುವೆಗಳ ಬಾಧೆಗೆ ಒಳಗಾದ ಉರಗದ ಆರೋಗ್ಯವು ಸ್ಥಿರವಾಗಿದೆ ಎಂಬುದಾಗಿ ಪಶುಪಾಲನಾ ವೈದ್ಯಾಧಿಕಾರಿ ದೃಢೀಕರಿಸಿದ್ದಾರೆ.

ಪ್ರಾಧಿಕಾರ ಆಯುಕ್ತರ ನಿರ್ದೇಶನದಂತೆ ಜೈವಿಕ ಉದ್ಯಾನವನದ ನಿರ್ದೇಶಕರು ಈ ಲೋಪಕ್ಕೆ ಕಾರಣರಾದವರ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಲುವಾಗಿ ಉರಗ ಪಾಲಕರಿಗೆ ನೋಟೀಸು ನೀಡಿ ವಿವರಣೆ ನೀಡಲು ತಿಳಿಸಿದ್ದಾರೆ.

ಚಂದ್ರಶೇಖರ್ ಗುರೂಜಿ ಹತ್ಯೆಗೆ ಸ್ಫೋಟಕ ಟ್ವಿಸ್ಟ್ – ಗುರೂಜಿ ಅಣ್ಣನ ಮಕ್ಕಳೇ ಮುಖ್ಯ ಕಾರಣ ಮಾಹಿತಿ ಬಹಿರಂಗ – Vishwanews24

ಇಂತಹ ಘಟನೆಯು ಪುನಃ ಮರುಕಳಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಕೂಡಲೇ ಪ್ರಾಧಿಕಾರದ ಆಯುಕ್ತರ ನೇತೃತ್ವದಲ್ಲಿ ಜೈವಿಕ ಉದ್ಯಾನವನದ ನಿರ್ದೇಶಕರು, ಹಿರಿಯ ವೈಜ್ಞಾನಿಕ ಅಧಿಕಾರಿ ಮತ್ತು ಪಶುಪಾಲನಾ ವೈದ್ಯಾಧಿಕಾರಿಯವರನ್ನು ಒಳಗೊಂಡು ವಿಶೇಷ ಸಭೆಯನ್ನು ನಡೆಸಲಾಗಿದೆ, ಅಂತೆಯೇ ಈ ಸಭೆಯಲ್ಲಿ ಇರುವೆಗಳ ಬಾಧೆಗೊಳಗಾದ ಆ ಉರಗದ ಆರೋಗ್ಯವನ್ನು ಪ್ರತೀ 2 ಗಂಟೆಗಳಿಗೊಮ್ಮೆ ಪರಿಶೀಲನೆ ನಡೆಸಿ ವರದಿಯನ್ನು ಆಯುಕ್ತರಿಗೆ ನೀಡಲು ತಿಳಿಸಲಾಗಿದೆ.

ಅಲ್ಲದೇ ಜೈವಿಕ ಉದ್ಯಾನವನದಲ್ಲಿ ಬೇರೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ದಿನದ ಎಲ್ಲಾ ಅವಧಿಯಲ್ಲಿ ಉರಗ ವಿಭಾಗಕ್ಕೆ ಹೆಚ್ಚುವರಿ ಸಿಸಿ ಕ್ಯಾಮರಾವನ್ನು ಅಳವಡಿಸಿ 24*7 ಕಣ್ಗಾವಲು ಮಾಡಲು ಕ್ರಮಕೈಗೊಳ್ಳಲಾಗುತ್ತದೆ.

ಉರಗಗಳ ಆವರಣದ ಒಳಗೆ ಯಾವುದೇ ತಿಂಡಿ ತಿನಿಸುಗಳನ್ನು ತೆಗೆದುಕೊಂಡು ಹೋಗದಂತೆ ನಿಗಾವಹಿಸಲು ಭದ್ರತಾ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ.

ಉರಗ ಆವರಣದ ಹೊರಭಾಗದ ಸ್ವಚ್ಛತೆಯನ್ನು ಆಗಾಗ ಮಾಡಲು ಹಾಗೂ ಇದರ ಮೇಲುಸ್ತುವಾರಿಯನ್ನು ಭದ್ರತಾಧಿಕಾರಿಯವರು ನೋಡಿಕೊಂಡು ವರದಿ ನೀಡಲು ಸೂಚಿಸಲಾಗಿದೆ.

ST’ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ : ಎಸ್ ಟಿ ಸಮುದಾಯದ ನಾಯಕರಿಂದ ನಾಳೆ ಸಿಎಂ ಗೆ ಸನ್ಮಾನ – Vishwanews24

ಇದಲ್ಲದೆ ಜೈವಿಕ ಉದ್ಯಾನದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಂಡು ಬರುವಲ್ಲಿ ತಿಂಡಿ ತಿನಿಸುಗಳ ಪ್ಯಾಕೇಟುಗಳು ಪ್ಲಾಸ್ಟಿಕ್ ಬಾಟಲಿ ಇನ್ನಿತರ ಸಾಮಾಗ್ರಿಗಳನ್ನು ಎಲ್ಲೆಂದರಲ್ಲಿ ಎಸೆಯದಂತೆ ಹಾಗೂ ಪ್ರಾಣಿಗಳ ಆವರಣಗಳಿಗೆ ಹಾನಿ ಉಂಟು ಮಾಡದಂತೆ, ಸಂದರ್ಶಕರಿಗೆ ಅರಿವು ಮೂಡಿಸಲು ಹೆಚ್ಚುವರಿ ಸೂಚನಾ ಫಲಕಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ನಗರಸಭೆ ವ್ಯಾಪ್ತಿಯ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ಅನುದಾನ ಮಂಜೂರು ಮಾಡುವಂತೆ  ಶಾಸಕ ಯಶ್ ಪಾಲ್ ಮನವಿ – vishwanews24

ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…

2 hours ago

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ – vishwanews24

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…

2 hours ago

ಉಡುಪಿ ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟಕ್ಕೆ ಲೈಸನ್ಸ್ : ಅರ್ಜಿ ಸಲ್ಲಿಸಲು ಅ.26 ಕೊನೆಯ ದಿನ – vishwanews24

ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…

2 hours ago

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ – vishwanews24

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ ಉಡುಪಿ…

2 hours ago

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ – vishwanews24

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಿಎಂ…

2 hours ago

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ – vishwanews24

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ ಮಣಿಪಾಲ: ಕಂಪೆನಿ ಕ್ಯು ಆರ್‌ಕೋಡ್ ಬಳಸದೆ ಮರ್ಚೆಂಟ್…

3 hours ago