Featured

ಮಂಗಳೂರು ಇಷ್ಟೊಂದು ಅಭಿವೃದ್ಧಿ ಕಂಡಿದ್ದರೆ ಅದಕ್ಕೆ ಕಾಂಗ್ರೆಸ್ ಕಾರಣ : ವಿನಯ ಕುಮಾರ್ ಸೊರಕೆ -Vishwanews24

ಮಂಗಳೂರು: ಬಿಜೆಪಿಗರಿಗೆ ಅಭಿವೃದ್ಧಿ ಮುಖ್ಯವಲ್ಲ. ಅಧಿಕಾರಕ್ಕಾಗಿ ಅವರು ಭಾವನಾತ್ಮಕ ವಿಚಾರಗಳನ್ನು ಜನರ ಮುಂದಿಟ್ಟು ಸವಾಜದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಹಾಗಾಗಿ ಮಂಗಳೂರು ಮನಪಾಕ್ಕೆ ನ.12ರಂದು ನಡೆಯುವ ಚುನಾವಣೆಯಲ್ಲಿ ಮತದಾರರು ಬಿಜೆಪಿಯ ಭಾವನಾತ್ಮಕ ಮಾತುಗಳಿಗೆ ಕಿವಿಗೊಡದೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಮಾಜಿ ಸಂಸದ ವಿನಯ ಕುಮಾರ್ ಸೊರಕೆ ಕರೆ ನೀಡಿದ್ದಾರೆ.

ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಅವರು ಕಾಂಗ್ರೆಸ್ ಅಭಿವೃದ್ಧಿ ಮುಂದಿಟ್ಟುಕೊಂಡೇ ಮತ ಯಾಚಿಸುತ್ತಿದೆ. ಆದರೆ, ಬಿಜೆಪಿಗರಿಗೆ ಅಭಿವೃದ್ಧಿ, ಸತ್ಯಾಂ, ವಾಸ್ತವ ಬೇಕಾಗಿಲ್ಲ. ಮಂಗಳೂರು ಇಷ್ಟೊಂದು ಅಭಿವೃದ್ಧಿ ಕಂಡಿದ್ದರೆ ಅದಕ್ಕೆ ಕಾಂಗ್ರೆಸ್ ಕಾರಣ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಂಗಳೂರಿನ ಅಭಿವೃದ್ಧಿಗೆ 5,465 ಕೋ.ರೂ. ವ್ಯಯಿಸಲಾಗಿದೆ. ಆದರೆ ಬಿಜೆಪಿಗರಿಗೆ ಅಭಿವೃದ್ಧಿ ಬೇಕಿಲ್ಲ. ಮಂಗಳೂರಿಗೆ ಕುಡಿಯುವ ನೀರು ಪೂರೈಕೆ, ಎಡಿಬಿ ಯೋಜನೆ, ಸ್ಮಾರ್ಟ್‌ಸಿಟಿ, ಕಾಂಕ್ರಿಟ್ ರಸ್ತೆಗಳ ನಿರ್ಮಾಣ ಇತ್ಯಾದಿ ಮಾಡಿದ್ದೇ ಕಾಂಗ್ರೆಸ್ ಪಕ್ಷವಾಗಿದೆ. ಬಿಜೆಪಿಯ ಆಡಳಿತಾವಧಿಯಲ್ಲಿ ನಡೆದ ಬಹುತೇಕ ಯುವತಿತರ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಕೂಡಾ ಬಿಜೆಪಿಗರು ಮುಂಚೂಣಿಯಲ್ಲಿದ್ದಾರೆ. ಬಿಜೆಪಿ ಅವಧಿಯಲ್ಲಾದ ನೋಟ್ ಬ್ಯಾನ್, ಜಿಎಸ್‌ಟಿಯಿಂದ ದೇಶದ ಆರ್ಥಿಕ ಕುಸಿತವೂ ಕಂಡಿದೆ. ಇದನ್ನೆಲ್ಲಾ ಮರೆ ಮಾಚಲು ಭಾವನಾತ್ಮಕ ವಿಚಾರವೇ ಬಿಜೆಪಿಗರಿಗೆ ಅಸ್ತ್ರವಾಗಿದೆ. ಇದನ್ನು ಮತದಾರರು ಮನಗಾಣಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಐವನ್ ಡಿಸೋಜ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಎನ್.ಎಸ್. ಕರೀಂ, ಶುಭೋದಯ ಆಳ್ವ, ಖಾಲಿದ್ ಉಜಿರೆ, ಜಯಶೀಲ ಅಡ್ಯಂತಾಯ, ನಝೀರ್ ಬಜಾಲ್ ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago