ಮಂಗಳೂರು: ಬಿಜೆಪಿಗರಿಗೆ ಅಭಿವೃದ್ಧಿ ಮುಖ್ಯವಲ್ಲ. ಅಧಿಕಾರಕ್ಕಾಗಿ ಅವರು ಭಾವನಾತ್ಮಕ ವಿಚಾರಗಳನ್ನು ಜನರ ಮುಂದಿಟ್ಟು ಸವಾಜದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಹಾಗಾಗಿ ಮಂಗಳೂರು ಮನಪಾಕ್ಕೆ ನ.12ರಂದು ನಡೆಯುವ ಚುನಾವಣೆಯಲ್ಲಿ ಮತದಾರರು ಬಿಜೆಪಿಯ ಭಾವನಾತ್ಮಕ ಮಾತುಗಳಿಗೆ ಕಿವಿಗೊಡದೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಮಾಜಿ ಸಂಸದ ವಿನಯ ಕುಮಾರ್ ಸೊರಕೆ ಕರೆ ನೀಡಿದ್ದಾರೆ.
ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಅವರು ಕಾಂಗ್ರೆಸ್ ಅಭಿವೃದ್ಧಿ ಮುಂದಿಟ್ಟುಕೊಂಡೇ ಮತ ಯಾಚಿಸುತ್ತಿದೆ. ಆದರೆ, ಬಿಜೆಪಿಗರಿಗೆ ಅಭಿವೃದ್ಧಿ, ಸತ್ಯಾಂ, ವಾಸ್ತವ ಬೇಕಾಗಿಲ್ಲ. ಮಂಗಳೂರು ಇಷ್ಟೊಂದು ಅಭಿವೃದ್ಧಿ ಕಂಡಿದ್ದರೆ ಅದಕ್ಕೆ ಕಾಂಗ್ರೆಸ್ ಕಾರಣ.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಂಗಳೂರಿನ ಅಭಿವೃದ್ಧಿಗೆ 5,465 ಕೋ.ರೂ. ವ್ಯಯಿಸಲಾಗಿದೆ. ಆದರೆ ಬಿಜೆಪಿಗರಿಗೆ ಅಭಿವೃದ್ಧಿ ಬೇಕಿಲ್ಲ. ಮಂಗಳೂರಿಗೆ ಕುಡಿಯುವ ನೀರು ಪೂರೈಕೆ, ಎಡಿಬಿ ಯೋಜನೆ, ಸ್ಮಾರ್ಟ್‌ಸಿಟಿ, ಕಾಂಕ್ರಿಟ್ ರಸ್ತೆಗಳ ನಿರ್ಮಾಣ ಇತ್ಯಾದಿ ಮಾಡಿದ್ದೇ ಕಾಂಗ್ರೆಸ್ ಪಕ್ಷವಾಗಿದೆ. ಬಿಜೆಪಿಯ ಆಡಳಿತಾವಧಿಯಲ್ಲಿ ನಡೆದ ಬಹುತೇಕ ಯುವತಿತರ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಕೂಡಾ ಬಿಜೆಪಿಗರು ಮುಂಚೂಣಿಯಲ್ಲಿದ್ದಾರೆ. ಬಿಜೆಪಿ ಅವಧಿಯಲ್ಲಾದ ನೋಟ್ ಬ್ಯಾನ್, ಜಿಎಸ್‌ಟಿಯಿಂದ ದೇಶದ ಆರ್ಥಿಕ ಕುಸಿತವೂ ಕಂಡಿದೆ. ಇದನ್ನೆಲ್ಲಾ ಮರೆ ಮಾಚಲು ಭಾವನಾತ್ಮಕ ವಿಚಾರವೇ ಬಿಜೆಪಿಗರಿಗೆ ಅಸ್ತ್ರವಾಗಿದೆ. ಇದನ್ನು ಮತದಾರರು ಮನಗಾಣಬೇಕು ಎಂದರು.
ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಐವನ್ ಡಿಸೋಜ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಎನ್.ಎಸ್. ಕರೀಂ, ಶುಭೋದಯ ಆಳ್ವ, ಖಾಲಿದ್ ಉಜಿರೆ, ಜಯಶೀಲ ಅಡ್ಯಂತಾಯ, ನಝೀರ್ ಬಜಾಲ್ ಉಪಸ್ಥಿತರಿದ್ದರು.
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…