Featured

ಮಂಗಳೂರು: ಈದ್ ರಜೆಯ ಬ್ಯಾನರ್: ಹಸಿಮೀನು ವ್ಯಾಪಾರಸ್ಥರ ಸಂಘದಿಂದ ಸ್ಪಷ್ಟನೆ – Vishwanews24

ಮಂಗಳೂರು: ಈದ್ ರಜೆಯ ಬ್ಯಾನರ್: ಹಸಿಮೀನು ವ್ಯಾಪಾರಸ್ಥರ ಸಂಘದಿಂದ ಸ್ಪಷ್ಟನೆ

ಮಂಗಳೂರು: ಈದ್ ಮಿಲಾದ್ ದಿನ ದಕ್ಕೆಯಲ್ಲಿ ವ್ಯಾಪಾರ ನಡೆಸಿದರೆ ಬಹಿಷ್ಕಾರ ಎಂದು ಹಸಿ ಮೀನು ವ್ಯಾಪಾರಸ್ಥರ ಸಂಘದ ಹೆಸರಲ್ಲಿ ಬ್ಯಾನರ್ ಹಾಕಿರುವ ಬಗ್ಗೆ ಮಂಗಳೂರು ಧಕ್ಕೆ ಹಸಿಮೀನು ಮಾರಾಟಗಾರರ ಮತ್ತು ಕಮಿಷನ್ ಏಜೆಂಟರ ಸಂಘದ ಅಧ್ಯಕ್ಷರು ಹಾಗೂ ಮಾಜಿ ಮೇಯರ್ ಕೆ.ಅಶ್ರಫ್ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.

ಮಂಗಳೂರು ಧಕ್ಕೆಯಲ್ಲಿ ಪ್ರತೀ ವರ್ಷದ ತನ್ನ ಮತ್ತು ಇತರ ಸಂಘದ ಸಭೆಯ ನಿರ್ಣಯದಂತೆ,ಹಸಿ ಮೀನು ವ್ಯಾಪಾರಸ್ಥರ ಸಂಘ, ಸದಸ್ಯರು ಅವರರವರು ಆಚರಿಸಿಕೊಂಡು ಬರುತ್ತಿರುವ ಧಾರ್ಮಿಕ ಹಬ್ಬ ದಿನಗಳಲ್ಲಿ ತಮ್ಮ ವ್ಯವಹಾರಕ್ಕೆ ಕಡ್ಡಾಯ ರಜೆ ಹೊಂದುವ ಪೂರ್ವ ನಿರ್ಧರಿತ ಪದ್ಧತಿಯಂತೆ ಸೆ.28ರಂದು ಮುಸ್ಲಿಮರ ಹಬ್ಬವಾದ ಈದ್ ಮಿಲಾದ್ ಪ್ರಯುಕ್ತ ಅವರು ಮತ್ತು ಇತರ ಧರ್ಮ ಭಾಂದವರು ಕಡ್ಡಾಯ ರಜೆ ಪಾಲಿಸುವ ಬಗ್ಗೆ ವಿವಿಧ ಸಂಘಗಳಲ್ಲಿ ನಿರ್ಣಯಿಸಿದಂತೆ ಪ್ರಕಟಣೆ ಫಲಕ ಅಳವಡಿಸಲಾಗಿರುತ್ತದೆ.

ಅದೇ ರೀತಿಯಲ್ಲಿ ವರ್ಷದ ಇತರ ದಿನಗಳಲ್ಲಿ ಇತರ ಹಬ್ಬಗಳಾದ ಬಾರ್ಕೂರು ಪೂಜೆ,ಉಚ್ಚಿಲ ಪೂಜೆ, ಗಣೇಶ ಚತುರ್ಥಿ, ಈದ್ ಉಲ್ ಫಿತರ್, ಬಕ್ರೀದ್, ಈದ್ ಮಿಲಾದ್, ಗುಡ್ ಫ್ರೈಡೇ ಮತ್ತು ಕ್ರಿಸ್ಮಸ್ ಎಂಬಿತ್ಯಾದಿ ಶುಭ ದಿನಗಳಲ್ಲಿ ಕೂಡಾ ಸಂಘಗಳ ನಿರ್ಣಯದಂತೆ ಮಾರಾಟಗಾರರು ಕಡ್ಡಾಯ ರಜೆ ಪಡೆದು ಆ ದಿನದ ಮಟ್ಟಿಗೆ ಮೀನುಗಾರಿಕಾ ಮಾರಾಟ ಚಟುವಟಿಕೆ ಸ್ಥಗಿತ ಗೊಳಿಸುವುದು ಅನೇಕ ವರ್ಷಗಳಿಂದ ನಡೆದು ಕೊಂಡು ಬಂದಿರುತ್ತದೆ.

ಮಂಗಳೂರು ದಕ್ಕೆಯಲ್ಲಿ ಮೀನುಗಾರಿಕಾ ಚಟುವಟಿಕೆಯಲ್ಲಿ ಹಸಿ ಮೀನು ಮಾರಾಟಗಾರರ ಮತ್ತು ಕಮಿಷನ್ ಏಜೆಂಟರ ಸಂಘ, ಪರ್ಶಿಯನ್ ಬೋಟ್ ಯೂನಿಯನ್, ಟ್ರಾಲ್ ಬೋಟ್ ಯೂನಿಯನ್, ಫಿಶ್ ಬಯ್ಯರ್ಸ್ ಎಸೋಸಿಯೇಶನ್ ಮತ್ತಿತರ ಸಂಘಗಳು ಸಂಯುಕ್ತವಾಗಿ ಈ ರಜೆಗಳನ್ನು ನಿರ್ಧರಿಸಲಾಗಿದೆ.
ಆದರೆ ಇತ್ತೀಚೆಗೆ ಸಾಮಾಜಿಕ ಜಾಲ ತಾಣದಲ್ಲಿ ಸಂಘದ ಮೀಲಾದ್ ರಜೆಯ ಪ್ರಕಟನಾ ಫಲಕ ( ಫ್ಲೆಕ್ಸ್ ) ದ ಬಗ್ಗೆ ಕೆಲವರು ತಪ್ಪು ಗ್ರಹಿಕೆಯ ಪ್ರಚೋದನಾತ್ಮಕ ಮಾಹಿತಿ ಹಂಚುತ್ತಿರುವುದು ಖೇದಕರ. ಇಂತಹ ತಪ್ಪು ಮಾಹಿತಿ ಗಳಿಂದ ಸಾರ್ವಜನಿಕರು ಗೊಂದಲಕ್ಕೆ ಒಳಗಾಗಬಾರದಾಗಿ ವಿನಂತಿ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಬ್ಯಾನರ್ ಗೆ ವಿಶ್ವ ಹಿಂದೂ ಪರಿಷತ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಆಗ್ರಹಿಸಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

13 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago