Featured

ಮಂಗಳೂರು : ಈಶ್ವರಪ್ಪ ರಾಜೀನಾಮೆ ಕೊಡದಿರೋದು ಬಿಜೆಪಿ ಮುಖವಾಡ ಬಯಲು ಮಾಡಿದೆ : ಯು.ಟಿ.ಖಾದರ್ – Vishwanews24

ರಾಜೀನಾಮೆ ಪಡೆಯದೆ ಬಿಜೆಪಿ ಕೆಟ್ಟ ಸಂಪ್ರದಾಯಕ್ಕೆ ಇವತ್ತು ನಾಂದಿ ಹಾಡಿದೆ ..

ಜನರಿಗೆ ಬಿಜೆಪಿ ಮತ್ತು ಕಾಂಗ್ರೆಸ್ ಆಡಳಿತದ ತೂಕ ಗೊತ್ತಾಗಿದೆ..

ಜನರಿಗೊಂದು ಕಾನೂನು ಹಾಗೂ ಬಿಜೆಪಿ ‌ನಾಯಕರಿಗೊಂದು ಕಾನೂನು ಇದೆಯಾ..

ಮಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಕೆ.ಎಸ್ ಈಶ್ವರಪ್ಪ, ರಾಜೀನಾಮೆ ಕೊಡದಿರೋದು ಬಿಜೆಪಿ ಮುಖವಾಡ ಬಯಲು ಮಾಡಿದೆ. ರಾಜೀನಾಮೆ ಪಡೆಯದೆ ಬಿಜೆಪಿ ಕೆಟ್ಟ ಸಂಪ್ರದಾಯಕ್ಕೆ ಇವತ್ತು ನಾಂದಿ ಹಾಡಿದೆ ಎಂದು ವಿಪಕ್ಷ ಉಪನಾಯಕ ಯು.ಟಿ.ಖಾದರ್ ಆರೋಪಿಸಿದ್ದಾರೆ.

ನಗರದಲ್ಲಿ ಏ.14ರ ಗುರುವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಪಕ್ಷಕ್ಕೆ ಅವರದ್ದೇ ಕಾರ್ಯಕರ್ತರನ್ನ ‌ರಕ್ಷಿಸಲು ಆಗಲಿಲ್ಲ. ಮಂತ್ರಿಯ ಮೇಲೆ ಎಫ್ ಐಆರ್ ಅದಾಗ ನಿಷ್ಪಕ್ಷಪಾತ ತನಿಖೆ ಆಗಬೇಕು. ಈ ಹಿಂದೆ ಇಂತಹ ಘಟನೆ ನಡೆದಾಗಪೊಲೀಸ್ ಅಧಿಕಾರಿಗಳಿಗೆ ಸ್ವತಂತ್ರ ತನಿಖೆ ಮಾಡಲು ಅವಕಾಶ ನೀಡಿ ‌ಮಂತ್ರಿಗಳು‌ ರಾಜೀನಾಮೆ ‌ಕೊಟ್ಟ ಇತಿಹಾಸ ಇದೆ. ಆದರೆ ಈಶ್ವರಪ್ಪ ರಾಜೀನಾಮೆ ಕೊಡದಿರೋದು ದೇಶದಲ್ಲಿ ಬಿಜೆಪಿ ಮುಖವಾಡ ಬಯಲು ಮಾಡಿದೆ. ಇದೊಂದು ಕೆಟ್ಟ ಸಂಪ್ರದಾಯಕ್ಕೆ ಬಿಜೆಪಿ ಇವತ್ತು ನಾಂದಿ ಹಾಡಿದೆ, ಇದರಿಂದ ಜನರಿಗೆ ಬಿಜೆಪಿ ಮತ್ತು ಕಾಂಗ್ರೆಸ್ ಆಡಳಿತದ ತೂಕ ಗೊತ್ತಾಗಿದೆ ಎಂದು ಹೇಳಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಆಡಳಿತ ಇದ್ದಾಗ ಸಚಿವ ಕೆ.ಜೆ.ಜಾರ್ಜ್ ಅವರ ಮೇಲಿನ ಆರೋಪ ದಾಖಲಾದಾಗ ಅವರು ರಾಜೀನಾಮೆ ನೀಡಿದ್ದಾರೆ. ಸರಕಾರ ಪ್ರಕರಣವನ್ನು ಸಿಬಿಐ ತನಿಖೆಗೂ ವಹಿಸಿತ್ತು. ಆಗ ಕಾನೂನು ಬೇರೆ, ಈಗ ಕಾನೂನು ಬೇರೆ ಆಗಿದ್ಯಾ? ಜನರಿಗೊಂದು ಕಾನೂನು ಹಾಗೂ ಬಿಜೆಪಿ ‌ನಾಯಕರಿಗೊಂದು ಕಾನೂನು ಇದೆಯಾ ಎಂದು ಪ್ರಶ್ನಿಸಿದ್ದಾರೆ.

ಸರ್ಕಾರದ ಕಾಮಗಾರಿಯಲ್ಲಿ ಶೇ 40 ಕಮೀಷನ್ ನೀಡಬೇಕು ಎಂದು ರಾಜ್ಯದ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಪ್ರಧಾನಿಗೆ ಪತ್ರ ಬರೆದು ಮನವಿ ಮಾಡಿದ್ದರೂ ಯಾವುದೇ ಕ್ರಮ ಆಗಿಲ್ಲ. ಇದೀಗ ಬಿಜೆಪಿ ಪಕ್ಷದ ಕಾರ್ಯಕರ್ತನಿಗೆ ರಕ್ಷಣೆ ಇಲ್ಲದೆ, ನ್ಯಾಯ ದೊರೆಯದೆ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬಿಜೆಪಿ ಆಡಳಿತದಿಂದ ಆಗಿದೆ. ಪ್ರಧಾನಿ ಮತ್ತು ಸಿಎಂಗೆ ಪತ್ರ ಬರೆದಿದ್ದರೂ ಒಂದೇ ಒಂದು ಉತ್ತರ ಯಾಕೆ ಕೊಟ್ಟಿಲ್ಲ. ಅಸೆಂಬ್ಲಿಯ ‌ನಿಲುವಲಿ ಸೂಚನೆ ಮೇಲೆ ಚರ್ಚೆಗೂ ಸರ್ಕಾರ ಅವಕಾಶ ಕೊಡದ ಸರ್ಕಾರ ತಕ್ಷಣ ಈಶ್ವರಪ್ಪ ರಾಜೀನಾಮೆ ಪಡೆಯಬೇಕು. ಮಾತ್ರವಲ್ಲದೆ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ವರ್ಕ್ ಆರ್ಡರ್ ಮತ್ತು ಆತ್ಮಹತ್ಯೆಗೆ ಸಂಬಂಧ ಕಲ್ಪಿಸಬೇಡಿ ಎಂದು ಅವರು ಅಲ್ಲಿ ಕೆಲಸ ನಡೆಯುತ್ತಿದ್ದಾಗ ಸಿಇಓ ಮತ್ತು ಅಲ್ಲಿನ ಅಧಿಕಾರಿಗಳು ಎಲ್ಲಿ ಹೋಗಿದ್ದರು, ಸರ್ಕಾರಿ ಜಾಗದಲ್ಲಿ ಯಾರೋ ಒಬ್ಬ ಕೆಲಸ ಮಾಡಿದಾಗ ಸುಮ್ಮನಿರುತ್ತಾರೆಯೇ ಈ ಬಗ್ಗೆ ಸೂಕ್ತ ತನಿಖೆ ಆಗಲಿ, ಸತ್ಯಾಂಶ ಇಲ್ಲದೇ ಇದ್ದರೆ ಮತ್ತೆ ಸ್ಥಾನಕ್ಕೆ ಬರಲಿ ಕಾಂಗ್ರೆಸ್ ಸಾವಿನ ಮನೆಯಲ್ಲಿ ರಾಜಕೀಯ ಮಾಡಲು ಹೋಗಲ್ಲ ಎಂದು ಹೇಳಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago