ಮಂಗಳೂರು: ಹಿಂದೂ ಸಂಘಟನೆಯ ಮಾಜಿ ಮುಖಂಡ ಸತ್ಯಜಿತ್ ಸುರತ್ಕಲ್ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದ.ಕ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಫೆ.25ರಂದು ಅಪರಾಹ್ನ 3 ಗಂಟೆಗೆ ತುಂಬೆಯ ಬಂಟರ ಭವನದಲ್ಲಿ ಜನಾಗ್ರಹ ಸಮಾವೇಶ ನಡೆಯಲಿದೆ.
ಸತ್ಯಜಿತ್ ಹಿಂದುತ್ವ, ಸಮಾಜಕ್ಕಾಗಿ 37 ವರ್ಷಗಳನ್ನು ತ್ಯಾಗ ಮಾಡಿದ್ದಾರೆ. ಅದಕ್ಕಾಗಿ ಅವರಿಗೆ ಅವಕಾಶ ನೀಡಬೇಕು ಎಂದು ಟೀಂ ಸತ್ಯಜಿತ್ ಸುರತ್ಕಲ್ ನ ಸಂಚಾಲಕ ಅಚ್ಯುತ ಅಮೀನ್ ಕಲ್ಮಾಡಿ ಇಂದು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ.
ಸತ್ಯಜಿತ್ ಗೆ ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರ ಅಭಿಪ್ರಾಯದಂತೆ ಮುಂದಿನ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದವರು ಹೇಳಿದರು.
ಟೀಂ ಸತ್ಯಜಿತ್ ಸುರತ್ಕಲ್‌ನ ಸಂಚಾಲಕರಾದ ರವಿರಾಜ್ ಬಿ.ಸಿ.ರೋಡ್, ಸಂದೀಪ್‌ಶೆಟ್ಟಿ ಅಂಬ್ಲಮೊಗರು, ಭಾಸ್ಕರ್ ರಾವ್ ಬಾಳ, ಯಶ್ಪಾಲ್ ಸಾಲ್ಯಾನ್ ಚಿತ್ರಾಪುರ, ನಿತಿನ್ ಸುವರ್ಣ ಕೆಂಜಾರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…