ಮಂಗಳೂರು: ನಗರದ ಸೇಂಟ್ ಆಗ್ನೆಸ್ ಕಾಲೇಜಿನ ಪದವಿ ತರಗತಿಗಳಿಗೆ ಈ ವರ್ಷ ವಿದ್ಯಾರ್ಥಿನಿಯರ ಜತೆ ವಿದ್ಯಾರ್ಥಿಗಳಿಗೂ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಸೇಂಟ್ ಆಗ್ನೆಸ್ ಸಂಸ್ಥೆಗಳ ಜಂಟಿ ಕಾರ್ಯದರ್ಶಿ ಡಾ. ಎಂ. ಲಿಡಿಯಾ ಎ.ಸಿ. ತಿಳಿಸಿದರು.
ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಈಗಾಗಲೇ ಸ್ನಾತಕೋತ್ತರ ವಿಭಾಗದಲ್ಲಿ ಸಹ ಶಿಕ್ಷಣ ನೀಡಲಾಗುತ್ತಿದ್ದು, ಅದನ್ನು ಪದವಿಗೂ ವಿಸ್ತರಿಸಲಾಗುತ್ತಿದೆ.
ಈ ಬಗ್ಗೆ ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ದೊರಕಿದ್ದು, 2022-23ನೇ ಸಾಲಿನಿಂದಲೇ ವಿದ್ಯಾರ್ಥಿಗಳಿಗೂ ಪದವಿ ತರಗತಿಗಳಿಗೆ ಪ್ರವೇಶ ನೀಡಲು ಕಾಲೇಜು ಸಿದ್ಧತೆ ನಡೆಸಿದೆ.
ಶಿಕ್ಷಣ ಸಂಸ್ಥೆಯ ಶತಮಾನೋತ್ಸವ ಸಂದರ್ಭದಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದರು. ಸೇಂಟ್ ಆಗ್ನೆಸ್ ಕಾಲೇಜು ಸ್ವಾಯತ್ತ ಸಂಸ್ಥೆಯಾಗಿದ್ದು, ವಿವಿಧ ವೃತ್ತಿಪರ ಕೋರ್ಸ್‍ಗಳನ್ನು ಪರಿಚಯಿಸುವ ಮತ್ತು ನಡೆಸುವ ಸೌಲಭ್ಯವನ್ನೂ ಹೊಂದಿದೆ.
ಕಾಲೇಜಿನ ಪ್ರಾಂಶುಪಾಲೆ ಡಾ. ಎಂ. ವೆನಿಸ್ಸಾ, ಆಡಳಿತ ಡೀನ್ ಶುಭರೇಖಾ, ಅಸೋಸಿಯೇಟ್ ಪ್ರೊಫೆಸರ್ ಡಾ. ದೇವಿಪ್ರಭಾ ಆಳ್ವ, ವಿದ್ಯಾರ್ಥಿನಿ ಪ್ರತಿನಿಧಿ ಕೃಪಾ ಮರಿಯಾ ರಸ್ಕಿನಾ ಇದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…