ಮಂಗಳೂರು : ಮಂಗಳೂರಿನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಪಾರ್ಟ್ ಮೆಂಟ್ ಗೋಡೆಯ ಮೇಲೆ ಉಗ್ರರ ಪರ ಗೊಡೆಬರಹ ಬರೆದ ಇಬ್ಬರು ಆರೋಪಿಗಳಿಗೆ ಜಾಮೀನು ಸಿಕ್ಕಿದ್ದು, ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ.
ತೀರ್ಥಹಳ್ಳಿಯ ಮಹಮ್ಮದ್ ಶಾರೀಕ್ ಮತ್ತು ಸಾದತ್ ಹುಸೇನ್ ಹೈಕೋರ್ಟ್‌ನಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದಾರೆ. 2020 ನ.27ರಂದು ಕದ್ರಿ ಠಾಣೆಯ ಬಳಿ ಬಿಜೈ ಅಪಾರ್ಟ್‌ಮೆಂಟ್‌ನ ಗೋಡೆಯಲ್ಲಿ ಈ ಬರಹ ಕಂಡು ಬಂದಿತ್ತು. ಈ ಗೋಡೆ ಬರಹದಲ್ಲಿ ‘ಇಲ್ಲಿನ ಸಂಘಿಗಳು ಮತ್ತು ಮನುವಾದಿಗಳ ಜೊತೆ ವ್ಯವಹರಿಸಲು ಲಷ್ಕರ್ ಮತ್ತು ತಾಲಿಬಾನಿಗಳನ್ನು ಸೇರುವಂತೆ ಮಾಡಬೇಡಿ. ಲಷ್ಕರ್ ಜಿಂದಾಬಾದ್, ತಾಲಿಬಾನ್ ಜಿಂದಾಬಾದ್’ ಎಂದು ಇಂಗ್ಲಿಷ್‌ನಲ್ಲಿ ಬರೆಯಲಾಗಿತ್ತು.ಈ ಗೋಡೆ ಬರಹ ಪ್ರಕರಣ ತಲ್ಲಣ ಸೃಷ್ಟಿಸುತ್ತಿದ್ದಂತೆ ಎನ್‌ಐಎ ಅಧಿಕಾರಿಗಳು ಮಂಗಳೂರಿಗೆ ಬಂದು ಆರೋಪಿಗಳ ವಿಚಾರಣೆ ನಡೆಸಿದ್ದರು. ಆದರೆ, ಇವರಿಗೆ ಯಾವುದೇ ಉಗ್ರರೊಂದಿಗೆ ನಂಟು ಇಲ್ಲ ಎಂಬ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿ ಕಳುಹಿಸಿದ್ದರು.
ಇಂಜಿನಿಯರಿಂಗ್ ವಿದ್ಯಾರ್ಥಿ ಮಾಝ್ ಮುನೀರ್‌ಗೆ ಬಂಧಿತನಾಗಿ ಎರಡು ತಿಂಗಳಿನಲ್ಲಿ ಮಂಗಳೂರು ಸೆಷನ್ಸ್ ನ್ಯಾಯಾಲಯದಿಂದ ಜಾಮೀನು ದೊರೆತಿತ್ತು..
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…