Featured

ಮಂಗಳೂರು: ಉಗ್ರಪರ ಗೋಡೆ ಬರಹ ಪ್ರಕರಣ : ಆರೋಪಿಗಳಿಗೆ ಜಾಮೀನು -Vishwanews24

ಮಂಗಳೂರು: ಉಗ್ರಪರ ಗೋಡೆ ಬರಹ ಪ್ರಕರಣ : ಆರೋಪಿಗಳಿಗೆ ಜಾಮೀನು -Vishwanews24

ಮಂಗಳೂರು : ಮಂಗಳೂರಿನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಪಾರ್ಟ್ ಮೆಂಟ್ ಗೋಡೆಯ ಮೇಲೆ ಉಗ್ರರ ಪರ ಗೊಡೆಬರಹ ಬರೆದ ಇಬ್ಬರು ಆರೋಪಿಗಳಿಗೆ ಜಾಮೀನು ಸಿಕ್ಕಿದ್ದು, ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ.

ತೀರ್ಥಹಳ್ಳಿಯ ಮಹಮ್ಮದ್ ಶಾರೀಕ್ ಮತ್ತು ಸಾದತ್ ಹುಸೇನ್ ಹೈಕೋರ್ಟ್‌ನಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದಾರೆ. 2020 ನ.27ರಂದು ಕದ್ರಿ ಠಾಣೆಯ ಬಳಿ ಬಿಜೈ ಅಪಾರ್ಟ್‌ಮೆಂಟ್‌ನ ಗೋಡೆಯಲ್ಲಿ ಈ ಬರಹ ಕಂಡು ಬಂದಿತ್ತು. ಈ ಗೋಡೆ ಬರಹದಲ್ಲಿ ‘ಇಲ್ಲಿನ ಸಂಘಿಗಳು ಮತ್ತು ಮನುವಾದಿಗಳ ಜೊತೆ ವ್ಯವಹರಿಸಲು ಲಷ್ಕರ್ ಮತ್ತು ತಾಲಿಬಾನಿಗಳನ್ನು ಸೇರುವಂತೆ ಮಾಡಬೇಡಿ. ಲಷ್ಕರ್ ಜಿಂದಾಬಾದ್, ತಾಲಿಬಾನ್ ಜಿಂದಾಬಾದ್’ ಎಂದು ಇಂಗ್ಲಿಷ್‌ನಲ್ಲಿ ಬರೆಯಲಾಗಿತ್ತು.ಈ ಗೋಡೆ ಬರಹ ಪ್ರಕರಣ ತಲ್ಲಣ ಸೃಷ್ಟಿಸುತ್ತಿದ್ದಂತೆ ಎನ್‌ಐಎ ಅಧಿಕಾರಿಗಳು ಮಂಗಳೂರಿಗೆ ಬಂದು ಆರೋಪಿಗಳ ವಿಚಾರಣೆ ನಡೆಸಿದ್ದರು. ಆದರೆ, ಇವರಿಗೆ ಯಾವುದೇ ಉಗ್ರರೊಂದಿಗೆ ನಂಟು ಇಲ್ಲ ಎಂಬ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿ ಕಳುಹಿಸಿದ್ದರು.

ಇಂಜಿನಿಯರಿಂಗ್ ವಿದ್ಯಾರ್ಥಿ ಮಾಝ್ ಮುನೀರ್‌ಗೆ ಬಂಧಿತನಾಗಿ ಎರಡು ತಿಂಗಳಿನಲ್ಲಿ ಮಂಗಳೂರು ಸೆಷನ್ಸ್ ನ್ಯಾಯಾಲಯದಿಂದ ಜಾಮೀನು ದೊರೆತಿತ್ತು..

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

45 seconds ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 hour ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 hour ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 hour ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

3 hours ago