ಮಂಗಳೂರು : ಉಡುಗೊರೆ ಕೊಡಿಸುವುದಾಗಿ ಭರವಸೆ ನೀಡಿ ವ್ಯಕ್ತಿಯೊಬ್ಬನಿಂದ 2.92 ಲಕ್ಷ ರೂಪಾಯಿ ವಂಚಿಸಿ ಪರಾರಿಯಾಗಿರುವ ಬಗ್ಗೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆಪ್ಟೆಂಬರ್ 20, 2021 ರಂದು ವ್ಯಕ್ತಿಯೊಬ್ಬನನ್ನು ವಾಟ್ಸಾಪ್ ಮೂಲಕ ಸಂಪರ್ಕಿಸಿ ನಿಮಗೆ ಮನೆ ನಿರ್ಮಿಸಲು ಸಹಾಯ ಮಾಡಲು ಸಿದ್ಧ ಎಂದು ತಿಳಿಸಿದರು. ಅಲ್ಲದೆ ಅದಕ್ಕೆ ಪ್ರತಿಯಾಗಿ ಆ ವ್ಯಕ್ತಿ ಅವರಿಗೆ ಉಡುಗೊರೆ ಕಳುಹಿಸುವುದಾಗಿಯೂ ಭರವಸೆ ನೀಡಿದ್ದರು ಹೀಗಾಗಿ ದೂರುದಾರರಿಗೆ ಕೂಳೂರಿನಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ಖಾತೆ ಹೊಂದಿದ ವ್ಯಕ್ತಿಯೂ ಹಣ ಕಳುಹಿಸಿದ್ದರು.
ಇನ್ನು ದೂರುದಾರರಿಗೆ ಅಕ್ಟೋಬರ್ 5 ರಂದು ಆಂಗ್ಲ ಭಾಷೆಯಲ್ಲಿ ಮಾತನಾಡುತ್ತಾ ಮತ್ತೊಮ್ಮೆ ಹೊಸ ಸಂಖ್ಯೆಯಿಂದ ಕರೆ ಮಾಡಿದ ವ್ಯಕ್ತಿ, ಉಡುಗೊರೆಯು ದೆಹಲಿ ತಲುಪಿದ್ದು, ಮಂಗಳೂರು ತಲುಪಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು 35,000 ರೂ.ನೀಡಬೇಕು ಎಂದು ಹೇಳಿದ್ದು, ಅದರಂತೆ ದೂರುದಾರರು ಕರೆ ಮಾಡಿದವರಿಗೆ ಗೂಗಲ್ ಪೇ ಮೂಲಕ ಮೊತ್ತವನ್ನು ಪಾವತಿಸಿದ್ದಾರೆ.
ಅದೇ ವ್ಯಕ್ತಿ ಮತ್ತೆ ದೂರುದಾರರಿಗೆ ಕರೆ ಮಾಡಿ 97,000 ರೂ ಹಣವನ್ನು ಖಾತೆಗೆ ಹಾಕುವಂತೆ ತಿಳಿಸಿದ್ದಾರೆ. ಮತ್ತೆ ಅದೆ ವ್ಯಕ್ತಿ ಕರೆ ಮಾಡಿ ನೆಫ್ಟ್ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಖಾತೆಗೆ 1.6 ಲಕ್ಷ ರೂಪಾಯಿಗಳನ್ನು ಕಳುಹಿಸಲಾಗಿದೆ. ಆದರೆ ಒಟ್ಟು 2.92 ಲಕ್ಷರೂ.ಗಳನ್ನು ಹಣ ಪಡೆದಿರುವ ವ್ಯಕ್ತಿಯು ಯಾವುದೇ ಉಡುಗೊರೆಯನ್ನು ಕಳುಹಿಸದೆ ವಂಚಿಸಿದ್ದಾರೆ ಎಂದು ವ್ಯಕ್ತಿ ತನ್ನ ದೂರಿನಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…