ಮಂಗಳೂರು/ಉಡುಪಿ: ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ನೂತನ ಕೆಪಿಸಿಸಿ ಅಧ್ಯಕ್ಷರಾದ ಬಿ ಕೆ ಹರಿಪ್ರಸಾದ್ ಅವರಿಗೆ ಮಂಗಳೂರಿನಲ್ಲಿ ಕಥೊಲಿಕ್ ಸಭಾ ಮಂಗಳೂರು, ಹಾಗೂ ಉಡುಪಿ ಪ್ರದೇಶ ವತಿಯಿಂದ ಮಂಗಳವಾರ ಮನವಿ ನೀಡಲಾಯಿತು.
ಕರಾವಳಿಯಲ್ಲಿ ಕ್ರೈಸ್ತ ಸಮುದಾಯವನ್ನು ಪ್ರತಿನಿಧಿಸುತ್ತಿರುವ ಐವನ್ ಡಿಸೋಜಾ ಅವರು ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಪರಿಷತ್ ಮುಖ್ಯ ಸಚೇತಕಾರಾಗಿ ಕ್ರೈಸ್ತ ಅಭಿವೃದ್ದಿ ನಿಗಮದಲ್ಲಿ ವಿವಿಧ ರೀತಿಯ ಜವಾಬ್ದಾರಿಯನ್ನು ವಹಿಸಿಕೊಂಡಿರುತ್ತಾರೆ. ಕಾಂಗ್ರೆಸ್ ಪಕ್ಷದ ಗೆಲುವಿಗೆ ಕ್ರೈಸ್ತ ಸಮುದಾಯದ ಕೊಡುಗೆ ಅಪಾರವಾಗಿದ್ದು ರಾಜ್ಯದ 22 ಜಿಲ್ಲೆಗಳಲ್ಲಿ ಕ್ರೈಸ್ತ ಸಮುದಾಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದೆ.
ಸಮುದಾಯಕ್ಕೆ ಪ್ರತಿ ಬಾರಿ ಉನ್ನತ ಸ್ಥಾನಗಳನ್ನು ನೀಡುವಾಗ ಅವಕಾಶ ವಂಚಿರಾಗುತ್ತಿದ್ದು ಈ ಬಾರಿ ಡಿ ಕೆ ಶಿವಕುಮಾರ್ ಅವರು ಎಲ್ಲಾ ಸಮುದಾಯಗಳನ್ನು ಸಮಾನವಾಗಿ ಅವಕಾಶ ನೀಡುವ ಕೆಲಸವನ್ನು ಮಾಡಬೇಕು. ಈ ಮೂಲಕ ಐವನ್ ಡಿಸೋಜಾ ಅವರಿಗೆ ಸಚಿವ ಸ್ಥಾನವನ್ನು ಅಥವಾ ವಿಧಾನಪರಿಷತ್ ಸಭಾಪತಿಯಾಗಿ ನೇಮಕ ಮಾಡಬೇಕು. ಅವರಿಗೆ ಸಚಿವ ಸ್ಥಾನವನ್ನು ನೀಡಿದ್ದಲ್ಲಿ ಮುಂದಿನ ದಿನಗಳಲ್ಲಿ ಪಕ್ಷದ ಏಳಿಗೆಗೆ ಮತ್ತಷ್ಟು ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ಪಕ್ಷದ ಅಧ್ಯಕ್ಷರಾಗಿ ಕ್ರೈಸ್ತ ಸಮುದಾಯಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡುವಂತೆ ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ನಿಯೋಗದಲ್ಲಿ ಕಥೊಲಿಕ್ ಸಭಾ ಮಂಗಳೂರು ಪ್ರದೇಶ ಅಧ್ಯಕ್ಷರಾದ ಸಂತೋಶ್ ಡಿಸೋಜಾ, ಉಪಾಧ್ಯಕ್ಷರಾದ ಸ್ಟೀವನ್ ರೊಡ್ರಿಗಸ್, ಮಾಜಿ ಅಧ್ಯಕ್ಷರಾದ ಸ್ಟ್ಯಾನಿ ಲೋಬೊ ಉಡುಪಿ ಪ್ರದೇಶ ಅಧ್ಯಕ್ಷ ಮೆಲ್ವಿನ್ ಆರಾನ್ಹ ಶಿರ್ವ, ಮಾಜಿ ಅಧ್ಯಕ್ಷರಾದ ವಾಲ್ಟರ್ ಸಿರಿಲ್ ಪಿಂಟೊ, ವಲೇರಿಯನ್ ಫೆರ್ನಾಂಡಿಸ್ ಹಾಗೂ ಇತರರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…