ಮಂಗಳೂರು/ಉಡುಪಿ,: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ವರುಣನ ಅಬ್ಬರಕ್ಕೆ ಕರಾವಳಿ ಮಂದಿ ತತ್ತರಗೊಂಡಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಮಂಗಳೂರಿನ ಸಮುದ್ರ ತೀರದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿಯುದ್ದಕ್ಕೂ ಬಿರುಗಾಳಿ ಬೀಸುವ ಸಾಧ್ಯತೆ ಹಿನ್ನಲೆ ಮೀನುಗಾರಿಕೆಗೆ ತೆರಳದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಿದೆ.
ಮಂಗಳೂರಿನಲ್ಲಿ ಇಂದು ಧಾರಾಕಾರ ಮಳೆಯ ಮುನ್ಸೂಚನೆ ಇದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಕರಾವಳಿ ಜಿಲ್ಲೆ ಉಡುಪಿಯಲ್ಲಿ ತಾಪಮಾನ ವಿಪರೀತ ಏರಿಕೆಯಾಗುತ್ತಿದೆ. ಉರಿ ಬಿಸಿಲಿನ ನಡುವೆ ಮೋಡದ ವಾತಾವರಣ ಇರುವುದರಿಂದ ಆದ್ರತೆ ಹೆಚ್ಚಾಗುತ್ತಿದೆ. ಕುಂದಾಪುರ ಬೈಂದೂರಿನಲ್ಲಿ 37ಸೆ. ಉಷ್ಣಾಂಶ ದಾಖಲಾಗಿದೆ. ಉಷ್ಣಾಂಶದ ನೇರ ಪರಿಣಾಮ ಕಡಲಿನ ಮೇಲೆ ಬಿದ್ದಿದ್ದು, ಸಮುದ್ರ ಪ್ರಕ್ಷ್ಯುಬ್ದವಾಗಿದೆ. ಈ ವಾರದಲ್ಲಿ ಗುಡುಗು ಸಿಡಿಲು ಮಳೆಯ ಮುನ್ನೆಚ್ಚರಿಕೆಯನ್ನ ಜಿಲ್ಲಾಡಳಿತ ನೀಡಿದೆ. ಭಾರೀ ಗಾತ್ರದ ಸಮುದ್ರದಲೆಗಳು ದಡಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. ಮೀನುಗಾರರು ಹಾಗೂ ಪ್ರವಾಸಿಗರು ಸಮುದ್ರಕ್ಕಿಳಿಯಬಾರದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…