ಮಂಗಳೂರು : 23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಟೆಂಡ್ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೃಷ್ಣಾಪುರ, ಕಾಟಿಪಳ್ಳ ಗ್ರಾಮದ ನಿವಾಸಿ ಅಜರುದ್ದೀನ್ ಅಲಿಯಾಸ್ ಅಜರ್ (ನಾಥು)(29) ಬಂಧಿತ ಆರೋಪಿ.
ಈತನ ಮೇಲೆ ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳಲ್ಲಿ ಜಾಮೀನು ರಹಿತ ವಾರಂಟ್ ಇದೆ.
ಇನ್ನು ಮಂಗಳೂರು ಪೊಲೀಸು ಆಯುಕ್ತರ ಆದೇಶದ ಮೇರೆಗೆ ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಆಯುಕ್ತರಾದ ಮನೋಜ್ ಕುಮಾರ್‌ರವರ ನಿರ್ದೇಶನದಂತೆ ಮಾರ್ಚ್ 22 ರಂದು ಸುರತ್ಕಲ್ ಪೊಲೀಸ್ ಠಾಣೆಯ ನಿರೀಕ್ಷಕರಾದ ಮಹೇಶ್ ಪ್ರಸಾದ್ ನೇತೃತ್ವದಲ್ಲಿ, ಉಪನಿರೀಕ್ಷಕರಾದ ಮಲ್ಲಿಕಾರ್ಜುನ್, ಸಿಬಂದಿಗಳಾದ ಅಜಿತ್ ಮ್ಯಾಥ್, ಮಣಿಕಂಠ, ಕಾರ್ತಿಕ್ ಅವರ ತಂಡ ಬಂಧಿಸಿದೆ.
ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆಭೀಕರ ರಸ್ತೆ ಅಪಘಾತ : 11 ಮಂದಿ ಸಾವು ಥಾಣೆ: ವ್ಯಾನ್ ಹಾಗೂ…
ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…
ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…
ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…
ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…
ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…