ಮಂಗಳೂರು: ಉದ್ಯಮಿ, ಬಿಜೆಪಿ ಹಿರಿಯ ನಾಯಕ ಸುಧೀರ್ ಘಾಟೆ ಅವರು ಶುಕ್ರವಾರ ವಿಧಿವಶರಾಗಿದ್ದಾರೆ. ಅವರಿಗೆ 64 ವರ್ಷ ಪ್ರಾಯವಾಗಿತ್ತು.
1992 ರಲ್ಲಿ ಜಾಹೀರಾತು ಸಂಸ್ಥೆ,’ ಮ್ಯಾಗ್ನಮ್ ಇಂಟರ್ ಗ್ರಾಫಿಕ್ಸ್’ ಕಟ್ಟಿ ಬೆಳೆಸಿದ್ದ ಸುಧೀರ್ ಘಾಟೆ ಮಂಗಳೂರಿನ ಪ್ರಸಿದ್ಧ ಉದ್ಯಮಿಯಾಗಿದ್ದರು.500 ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ನೀಡಿದ್ದರು.
ಆರ್ ಎಸ್‌ಎಸ್ ಲೆಕ್ಕ ಪರಿಶೋಧಕರ ಕಚೇರಿಯಲ್ಲಿ ತನ್ನ ವೃತ್ತಿ ಜೀವನವನ್ನು ಆರಂಭಿಸಿದ್ದ ಸುಧೀರ್ ಘಾಟೆ 1995ರಲ್ಲಿ ರಾಜ್ಯ ಬಿಜೆಪಿಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷ ಕಟ್ಟಿದ್ದರು.
ಬಿ ಎಂಎಸ್ ನ ಪ್ರಧಾನ ಕಾರ್ಯದರ್ಶಿಯಾಗಿದ್ದ ದಿವಂಗತ ಪ್ರಭಾಕರ್ ಘಾಟೆ- ಶಾರದಾ ಘಾಟೆ ದಂಪತಿ ಪುತ್ರರಾದ ಸುಧೀರ್ ಪಿಆರ್ ಐಎಸ್ ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಅಟಲ್ ಬಿಹಾರಿ ವಾಜಪೇಯಿ, ಸುಷ್ಮಾ ಸ್ವರಾಜ್, ಲಾಲ್ ಕೃಷ್ಣ ಆಡ್ವಾಣಿ, ಮುರಳಿ ಮನೋಹರ್ ಜೋಷಿ ಸೇರಿ ರಾಜ್ಯದ ಹಿರಿಯ ಬಿಜೆಪಿ ನಾಯಕರ ಒಡನಾಟ ಸುಧೀರ್ ಘಾಟೆಯವರಿಗಿತ್ತು.
ಘಾಟೆ ಅವರು ಪತ್ನಿ, ಪುತ್ರ , ಪುತ್ರಿ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ. ಅಪಾರ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…